ಸಿದ್ದಾಪುರ, ಜ. ೬: ಸಿದ್ದಾಪುರದ ಬ್ರದರ್ಸ್ ಯುವಕ ಸಂಘದ ವತಿಯಿಂದ ಸಿದ್ದಾಪುರದ ಪ್ರೌಢಶಾಲಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಬ್ಯಾಟ್ ಮಾಡುವ ಮೂಲಕ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಪೊನ್ನಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಿದ್ದಾಪುರ ಸುತ್ತಮುತ್ತಲ ಭಾಗದ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭಾವಂತ ಯುವ ಕ್ರೀಡಾಪಟುಗಳು ಹೆಚ್ಚಾಗಿರುವುದು ಸಂತಸ ತಂದಿದೆ. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಯುವ ಸಂಘಟನೆಗಳು ಪರಸ್ಪರ ಸಂಘಟಿತರಾಗಿ ಕ್ರೀಡೆಯನ್ನು ಆಯೋಜಿಸುವ ಮೂಲಕ ಒಗ್ಗಟ್ಟಾಗಿ ಇರುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್. ವೆಂಕಟೇಶ್. ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ್. ಗ್ರಾಮ ಪಂಚಾಯಿತಿ ಸದಸ್ಯ ಜಾಫರ್ ಆಲಿ. ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕುಂಡಚ್ಚಿರ ಮಂಜು ದೇವಯ್ಯ ಇನ್ನಿತರರು ಹಾಜರಿದ್ದರು.