ವೀರಾಜಪೇಟೆ, ಜ. ೬: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜೀವಶಾಸ್ತç ಉಪನ್ಯಾಸಕಿಯಾಗಿ ಹಾಗೂ ಕಾಲೇಜಿನ ಪ್ರಾಂಶುಪಾಲೆಯಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಅವರಿಗೆ ಕಾಲೇಜಿನ ವತಿಯಿಂದ ಬೀಳ್ಕೊಡುಗೆಯನ್ನು ನೀಡಿ ಗೌರವಿಸಲಾಯಿತು.

ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಮಾತನಾಡಿ, ಪ್ರಾಂಶುಪಾಲರ ಶಿಸ್ತು ಹಾಗೂ ಕರ್ತವ್ಯ ನಿಷ್ಠೆ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯನ್ನು ಹಾಕಿದೆ. ಅವರ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊAಡಿದ್ದಾರೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲೆ ಜ್ಯೋತಿ ಪ್ರಕಾಶ್, ತಮ್ಮ ಸುದೀರ್ಘವಾದ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊAಡರು. ಉಪನ್ಯಾಸಕ ರೈಮಂಡ್ ಸ್ವಾಗತಿಸಿ, ಉಪನ್ಯಾಸಕಿ ಚೈತ್ರ ನಿರೂಪಿಸಿ, ಉಪನ್ಯಾಸಕಿ ಗಾಯತ್ರಿ ವಂದಿಸಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲೆ ಜ್ಯೋತಿ ಅವರ ತಾಯಿಯವರಾದ ನಾಮೇರ ಜಾನಕಿ ಕುಟ್ಟಪ್ಪ, ಕುಟುಂಬಸ್ಥರು, ಸಹ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.