ಮಡಿಕೇರಿ, ಜ. ೭: ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಪುಸ್ತಕಗಳ ನೋಂದಣಿ ಕಾಯ್ದೆ ಅನ್ವಯ, ಪ್ರಕಾಶಕರು ೨೦೨೫ ರಲ್ಲಿ ಮುದ್ರಿಸಿ ಪ್ರಕಟಿಸಿದ ಮೊದಲ ಆವೃತ್ತಿಯ ಪುಸ್ತಕಗಳ ೩ ಪ್ರತಿಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಆಯ್ಕೆಗಾಗಿ ಮೊದಲ ಆವೃತ್ತಿ ಪುಸ್ತಕ ಆಹ್ವಾನಿಸಲಾಗಿದೆ. ರಾಜ್ಯ ಕೇಂದ್ರ ಗ್ರಂಥಾಲಯ ಕಬ್ಬನ್ ಪಾರ್ಕ್, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು. ಸಲ್ಲಿಸಲಾದ ೩ ಪ್ರತಿಗಳಲ್ಲಿ ಒಂದನ್ನು ಆಯ್ಕೆಗಾಗಿ ಪರಿಗಣಿಸಲಾಗುತ್ತದೆ.

೨೦೨೫ ರಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳಲ್ಲಿ ಪ್ರತಿ ಶೀರ್ಷಿಕೆ ಮೂರು ಪ್ರತಿಗಳನ್ನು ಮುಫತ್ತಾಗಿ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಸಲ್ಲಿಸಿ ತಾ. ೩೧ ರ ಸಂಜೆ ೫.೩೦ ರೊಳಗೆ ನೋಂದಣಿ ಮಾಡಿಸಬೇಕು. ನೋಂದಣಿಯಾದ ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪರಿಗಣಿಸಲಾಗುವುದು. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗಾಗಿ ಪರಿಗಣಿಸಲಾಗುವುದಿಲ್ಲ.

ಹೊರ ರಾಜ್ಯಗಳಲ್ಲಿ ೨೦೨೫ ರಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟವಾಗುವ ಆಂಗ್ಲ, ಹಿಂದಿ ಅಥವಾ ಯಾವುದೇ ಭಾಷೆಯ ಪುಸ್ತಕಗಳನ್ನು ಆಯಾಯ ರಾಜ್ಯ ಕೇಂದ್ರ ಗ್ರಂಥಾಲಯಗಳಲ್ಲಿ ಅಥವಾ ಕೇಂದ್ರ/ ಆಯಾಯ ರಾಜ್ಯ ಸರ್ಕಾರಗಳಿಂದ ಅಧಿಸೂಚಿಸಲ್ಪಟ್ಟ ಅಧಿಕೃತ ಪುಸ್ತಕ ನೋಂದಣಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿ, ನೋಂದಣಿ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ಮತ್ತು ಈ ಪುಸ್ತಕದ ಒಂದು ಪ್ರತಿಯನ್ನು ತಾ. ೩೧ ರ ಸಂಜೆ ೫.೩೦ ರೊಳಗೆ ಆಯ್ಕೆಗಾಗಿ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ಸಲ್ಲಿಸತಕ್ಕದ್ದು, ನಿಗದಿತ ದಿನಾಂಕದ ನಂತರ ಸಲ್ಲಿಸುವ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ.

ಸಾಹಿತ್ಯ, ಮಕ್ಕಳ ಸಾಹಿತ್ಯ, ಕಲೆ ಮತ್ತು ವಿಜ್ಞಾನ ಪ್ರಕಾರಗಳ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಸಲ್ಲಿಸಬಹುದು. ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಪುಸ್ತಕಗಳನ್ನು ಆಯ್ಕೆಗೆ ಪರಿಗಣಿಸಲು ವಿಧಿಸಲಾದ ನಿಬಂಧನೆಗಳನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ.

೨೦೨೫ನೇ ವರ್ಷದಲ್ಲಿ ಪ್ರಕಟಗೊಂಡ ಪುಸ್ತಕಗಳ ಆಯ್ಕೆಗೆ ಪ್ರತ್ಯೇಕವಾಗಿ ಆಯುಕ್ತರ ಕಚೇರಿಯಲ್ಲಿ ಯಾವುದೇ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ಆದ್ದರಿಂದ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಪುಸ್ತಕಗಳನ್ನು ಸಲ್ಲಿಸಲು ಇಚ್ಚಿಸುವ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಯವರು ನಿಗದಿತ ಅವಧಿಯೊಳಗೆ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಪುಸ್ತಕಗಳ ನೋಂದಣಿ ಅಧಿನಿಯಮದಡಿ ನಿಯಮಾನುಸಾರ ಪುಸ್ತಕಗಳನ್ನು ಸಲ್ಲಿಸತಕ್ಕದ್ದು, ನೋಂದಣಿಗಾಗಿ ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಗೆ ಇಲಾಖಾ ಅಂತರ್ಜಾಲ ಜಠಿಟ.ಞಚಿಡಿಟಿಚಿಣಚಿಞಚಿ.gov.iಟಿ ಆಯುಕ್ತರ ಕಚೇರಿ ದೂರವಾಣಿ ಸಂಖ್ಯೆ ೦೮೦-೨೨೮೬೪೯೯೦, ೨೨೮೬೭೩೫೮ ಮತ್ತು ರಾಜ್ಯ ಕೇಂದ್ರ ಗ್ರಂಥಾಲಯ ದೂರವಾಣಿ ಸಂಖ್ಯೆ: ೦೮೦-೨೨೨೧೨೧೨೮ ನ್ನು ಅಥವಾ ಮುಖ್ಯ ಗ್ರಂಥಾಲಯಾಧಿಕಾರಿ ಕಚೇರಿ, ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಸುರೇಖಾ ತಿಳಿಸಿದ್ದಾರೆ.