ಪೊನ್ನAಪೇಟೆ, ಡಿ. ೭: ರಕ್ತದಾನದಿಂದ ರಕ್ತದೊತ್ತಡ, ಮಧುಮೇಹ, ಹೃದಯಾಘಾತದಂತಹ ಕಾಯಿಲೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಹಾಯವಾಗುತ್ತÀದೆ ಎಂದು ಮಡಿಕೇರಿ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಕರುಂಬಯ್ಯ ಹೇಳಿದರು.
ಗೋಣಿಕೊಪ್ಪಲು ಲಯನ್ಸ್ ಕ್ಲಬ್, ಪೊನ್ನಂಪೇಟೆ ಶ್ರೀ ನಂದೀಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘ, ಕೊಡಗು ಬ್ಲಡ್ ಡೋನರ್ಸ್ ಹಾಗೂ ಜಿಲ್ಲಾ ರಕ್ತ ನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪೊನ್ನಂಪೇಟೆಯ ಕೊಡವ ಸಮಾಜ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಲಿದ್ದು, ಇಡೀ ಜಿಲ್ಲೆಯ ರೋಗಿಗಳಿಗೆ ರಕ್ತ ಪೂರೈಕೆ ಮಾಡುವ ಅನಿವಾರ್ಯತೆ ಬರಲಿದೆ. ಆದುದರಿಂದ ಯುವ ಜನತೆ ರಕ್ತದಾನ ಮಾಡುವ ಧೈರ್ಯ ಮಾಡಿ ಮುಂದೆ ಬರಬೇಕು ಎಂದು ಕರೆ ನೀಡಿದರು.
ಗೋಣಿಕೊಪ್ಪಲು ಲಯನ್ಸ್ ಕ್ಲಬ್ ಅಧ್ಯಕ್ಷ ಚೆಪ್ಪುಡೀರ ಬೋಪಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲು ಲಯನ್ಸ್ ಕ್ಲಬ್ ಕಾರ್ಯದರ್ಶಿ ಸೌಮ್ಯ ಬಾಲು, ಪೊನ್ನಂಪೇಟೆ ಶ್ರೀ ನಂದೀಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಉಪಾಧ್ಯಕ್ಷ ಚಮ್ಮಟ್ಟೀರ ಶಾಂತ ಪೊನ್ನಪ್ಪ, ಕಾರ್ಯದರ್ಶಿ ಬಿ.ಎಸ್ ಸುರೇಶ್ ಕೊಡಗು ಬ್ಲಡ್ ಡೋನರ್ಸ್ ಉಪಾಧ್ಯಕ್ಷ ಅಶ್ರಫ್, ಪೊನ್ನಂಪೇಟೆ ಘಟಕದ ಅಧ್ಯಕ್ಷ ಚೀರಂಡ ಚಂಗಪ್ಪ , ಲಯನ್ಸ್ ಕ್ಲಬ್ ಖಜಾಂಚಿ ಐನಂಡ ಸೋಮಣ್ಣ, ಲಯನ್ಸ್ ಕ್ಲಬ್ ವಲಯ ಅಧ್ಯಕ್ಷ ಚೆಟ್ಟಿಮಾಡ ಅಪ್ಪಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.