ಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ ಅವರು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ವ್ಯಾಪ್ತಿಯ ಅಕ್ರಮ ಬಡಾವಣೆಗಳಲ್ಲಿರುವ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು. ಗ್ರೇಟರ್ ಬೆಂಗಳೂರು ಅಥಾರಿಟಿ ಮಾದರಿಯಲ್ಲೇ ನಿಯಮ ರೂಪಿಸಿ ರಾಜ್ಯದಾದ್ಯಂತ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಲಾಗುತ್ತೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ 'ಬಿ-ಖಾತಾ' ನಿವೇಶನ/ಕಟ್ಟಡ/ ಅಪಾರ್ಟ್ ಮೆಂಟ್/ ಫ್ಲಾಟ್ಗಳಿಗೆ ಎ-ಖಾತಾ" ನೀಡಲು ಸಂಪುಟ ಒಪ್ಪಿಗೆ ನೀಡಿದೆ ಎಂದರು. ಜಿಬಿಎ ಮಾದರಿಯಲ್ಲೆ ನಿಯಮ ರೂಪಿಸಿ ಎ ಖಾತಾ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾ ಆಸ್ತಿಗಳಾಗಿ ಪರಿವರ್ತಿಸಿಕೊಳ್ಳಲು ಅವಕಾಶ ಸಿಗಲಿದೆ ಎಂದು ಸಚಿವರು ತಿಳಿಸಿದರು. ಇನ್ನು ದಂಡದ ಪ್ರಮಾಣ ಇನ್ನೂ ನಿಗದಿ ಮಾಡಿಲ್ಲ. ಈಗಾಗಲೇ ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿಯ ಮಾರ್ಗಸೂಚಿ ದರದ ಶೇ. ೫ ರಷ್ಟು ದಂಡ ಕಟ್ಟಿ ಎ ಖಾತಾ ಪಡೆಯಲು ಅವಕಾಶ ಕೊಟ್ಟಿದೆ. ಆದರೆ ಶೇ. ೫ ರಷ್ಟು ದಂಡಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಅಷ್ಟೇ ಅಲ್ಲ ಹೆಚ್ಚು ಅರ್ಜಿ ಸಲ್ಲಿಕೆಯೂ ಆಗಿಲ್ಲ. ಹಾಗಾಗಿ ಶೇ. ೫ ದಂಡದ ಪ್ರಮಾಣ ಇಳಿಕೆ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.
ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಭಾಗ್ಯವಿಲ್ಲ
ಬೆಂಗಳೂರು, ಜ. ೮: ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿö್ಮ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷಿö್ಮ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಬಿಡುಗಡೆ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷಿö್ಮ ಹೆಬ್ಬಾಳ್ಕರ್, ಬಿಪಿಎಲ್ ಕಾರ್ಡ್ ರದ್ದಾಗಿರುವವರಿಗೆ ಹಣ ವರ್ಗಾವಣೆಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷಿö್ಮ ಹೆಬ್ಬಾಳ್ಕರ್, ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ ೨೦೨೫ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷಿö್ಮ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. ಈ ಎರಡು ತಿಂಗಳ ಗೃಹಲಕ್ಷಿö್ಮ ಯೋಜನೆ ಹಣ ಬಿಡುಗಡೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದರು. ಇದೇ ವೇಳೆ ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷಿö್ಮÃ ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು. ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷಿö್ಮÃ ಹಣ ನೀಡಲಾಗುತ್ತಿತ್ತು. ಆದ್ರೆ, ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗಿದ್ದು, ಇದೀಗ ಅಂತವರ ಗೃಹಲಕ್ಷಿö್ಮÃ ಹಣ ಸಹ ಸ್ಥಗಿತಗೊಳಿಸಲಾಗುತ್ತಿದೆ. ಅನರ್ಹ ರೇಷನ್ ಕಾರ್ಡ್ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ ತಕ್ಷಣ ಅವರಿಗೂ ದುಡ್ಡು ರಿಲೀಸ್ ಆಗಲಿದೆ. ರೇಷನ್ ಕಾರ್ಡ್ ಆಧರಿಸಿ ನಾವು ಗೃಹಲಕ್ಷಿö್ಮ ಫಲಾನುಭವಿಗಳಿಗೆ ದುಡ್ಡು ಹಾಕುತ್ತಿದ್ದೇವೆ. ಕೆಲ ರೇಷನ್ ಕಾರ್ಡ್ ರದ್ದಾದಾಗ ದುಡ್ಡು ಹೋಲ್ಡ್ ಆಗಿರಬಹುದು. ಆದರೆ, ಅವರು ತೆರಿಗೆ ಪಾವತಿದಾರರಲ್ಲದಿದ್ದಲ್ಲಿ ಹಣ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಬಾಯ್ಲರ್ ಸ್ಫೋಟ; ಮೃತರ ಸಂಖ್ಯೆ ೭ಕ್ಕೆ ಏರಿಕೆ
ಬೆಳಗಾವಿ, ಜ. ೮: ಗುರುವಾರ ಮತ್ತೆ ನಾಲ್ವರು ಸಾವಿಗೀಡಾಗಿದ್ದು, ಇಲ್ಲಿನ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಆರಂಭದಲ್ಲಿ ಮೂವರು ಮೃತಪಟ್ಟಿದ್ದರು. ಮೃತ ಮೂವರನ್ನು ಜಮಖಂಡಿಯ ಅಕ್ಷಯ ಚೋಪಡೆ (೪೫), ನೇಸರಗಿಯ ದೀಪಕ್ ಮುನವಳ್ಳಿ (೩೧), ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿಯ ಸುದರ್ಶನ ಬನೋಶಿ (೨೫) ಎಂದು ಗುರುತಿಸಲಾಗಿದೆ. ಕಬ್ಬಿನ ರಸವನ್ನು ಕುದಿಸಲು ಬಳಸುವ ೪೦ ಅಡಿ ಎತ್ತರದ ಪಾತ್ರೆಯಾದ ಎವಿಸಿಪಿ ನಂ. ೧ ರ ದುರಸ್ತಿ ಕಾರ್ಯದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಕಾರ್ಖಾನೆ ಅಧಿಕಾರಿಗಳ ಪ್ರಕಾರ, ದುರಸ್ತಿಗೆ ಮುಂಚಿತವಾಗಿ ಘಟಕವನ್ನು ಮುಚ್ಚಲಾಗಿತ್ತು.
ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ!
ಪುಣೆ, ಜ. ೮: ಹಿರಿಯ ಪರಿಸರ ವಿಜ್ಞಾನಿ ಮಾಧವ ಧನಂಜಯ ಗಾಡ್ಗೀಳ್ ನಿಧನರಾಗಿದ್ದಾರೆ. ಅವರಿಗೆ ೮೩ ವರ್ಷ ವಯಸ್ಸಾಗಿತ್ತು. ಪಶ್ಚಿಮಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಪುಣೆಯ ಪ್ರಯಾಗ್ ಆಸ್ಪತ್ರೆಯಲ್ಲಿ ನಿಧನರಾದರು. ಇಂದು ಸಂಜೆ ಪುಣೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ೧೯೪೨ ಮೇ ೨೪ ರಂದು ಪುಣೆಯಲ್ಲಿ ಜನಿಸಿದ ಮಾಧವ ಗಾಡ್ಗೀಳ್ ಅವರು ಪುಣೆಯ ಫರ್ಗುಸನ್ ಕಾಲೇಜಿನಿಂದ ಬಿಎಸ್ಸಿ (ಪ್ರಾಣಿಶಾಸ್ತç) ಪದವಿ ಪಡೆದು ೧೯೬೫ ರಲ್ಲಿ ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪಡೆದು ೧೯೬೯ ರಲ್ಲಿ ಹಾರ್ವರ್ಡ್ನಿಂದ ಜೀವಶಾಸ್ತçದಲ್ಲಿ ಪಿಹೆಚ್ಡಿ ಪದವಿ ಪಡೆದಿದ್ದರು. ಭಾರತಕ್ಕೆ ೧೯೭೧ ರಲ್ಲಿ ಮರಳಿದ ಬಳಿಕ ೧೯೭೩ ರಲ್ಲಿ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯನ್ನು ಸೇರಿ ೨೦೦೪ ರಲ್ಲಿ ಅಧ್ಯಕ್ಷರಾಗುವ ಮೂಲಕ ಮಾರು ೩೦ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಪರಿಸರ ಶಾಸ್ತçಜ್ಞ, ಬರಹಗಾರ ಹಾಗೂ ಅಂಕಣಕಾರರಾಗಿ ಗುರುತಿಸಿಕೊಂಡಿದ್ದ ಗಾಡ್ಗೀಳ್ ಅವರು, ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಮಾಜಿ ಸದಸ್ಯರಾಗಿದ್ದರು ಮತ್ತು ೨೦೧೦ ರ ಪಶ್ಚಿಮಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿ ಮುಖ್ಯಸ್ಥರಾಗಿದ್ದರು. ಇವರು ಅಧ್ಯಯನ ನಡೆಸಿ ತಯಾರಿಸಿದ್ದ ವರದಿಯನ್ನು ಗಾಡ್ಗೀಳ್ ಆಯೋಗದ ವರದಿ ಎಂದೇ ಕರೆಯಲಾಗುತ್ತಿತ್ತು. ಪರಿಸರ ಕ್ಷೇತ್ರದಲ್ಲಿನ ಸಾಧನೆಗಾಗಿ ಗಾಡ್ಗೀಳ್ ಅವರಿಗೆ ವೋಲ್ವೋ, ಟೈಲರ್ ಅನೇಕ ಪ್ರಶಸ್ತಿ ಪುರಸ್ಕಾರಗಳು ಸಂದಿವೆ. ಭಾರತ ಸರ್ಕಾರ ೧೯೮೧ ರಲ್ಲಿ ಅವರಿಗೆ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ೨೦೦೬ ರಲ್ಲಿ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ನೀಡಿತು. ೨೦೨೪ ರಲ್ಲಿ ಚಾಂಪಿಯನ್ಸ್ ಆಫ್ ದಿ ಅರ್ಥ್ ಪ್ರಶಸ್ತಿಯನ್ನು ಪಡೆದಿದ್ದರು.