ಮಡಿಕೇರಿ, ಜ. ೭: ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿ ಕರೆಯಲಾಗಿದ್ದು, ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ದಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ.

ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ ೫ ಪುಟಗಳ ಸಾರಲೇಖವನ್ನು ಬರೆದು ತಾ. ೨೩ ರೊಳಗೆ ರಿಜಿಸ್ಟಾçರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ಕಳುಹಿಸಿಕೊಡಲು ಕೋರಿದೆ.

ಸಾರಲೇಖ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು.

ಫೆಲೋಶಿಪ್‌ಗಾಗಿ ಸಾಮಾನ್ಯ-೧, ಪರಿಶಿಷ್ಟ ಜಾತಿ-೫ ಮತ್ತು ಪರಿಶಿಷ್ಟ ಪಂಗಡ-೯ ಮಂದಿಗಳು ಸೇರಿದಂತೆ ೧೫ ಮಂದಿಗಾಗಿ ಅಭ್ಯರ್ಥಿಗಳಿಂದ ಫೆಲೋಶಿಪ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ hಣಣಠಿs://ರಿಚಿಟಿಚಿಠಿಚಿಜಚಿ.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಮಾಹಿತಿ ಪಡೆಯಬಹುದು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟಾçರ್ ಅವರು ತಿಳಿಸಿದ್ದಾರೆ.