ಸುಂಟಿಕೊಪ್ಪ, ಜ. ೮: ಮೈಸೂರು ವಿಶ್ವ ವಿದ್ಯಾನಿಲಯದ ಕೊಡಗಿನ ವಿದ್ಯಾರ್ಥಿನಿ ಬಿ.ಪಿ. ಕೃತಿಕಾ ಸ್ನಾತಕೋತ್ತರ ಪದವಿಯನ್ನು ಮೊದಲ ರ್ಯಾಂಕ್ನೊAದಿಗೆ ಪಡೆದಿದ್ದು, ೫ ಚಿನ್ನದ ಪದಕ ಹಾಗೂ ೧ ನಗದು ಬಹುಮಾನಕ್ಕೆ ಭಾಜನಳಾಗಿದ್ದಾರೆ.
ಮೂಲತಃ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿ ಗ್ರಾಮ ನಿವಾಸಿ ನಿವೃತ್ತ ಎ.ಎಸ್.ಐ. ಪಾರ್ಥ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಗೀತಾ ಪಾರ್ಥ ಅವರ ಪುತ್ರಿ, ಪೊನ್ನಂಪೇಟೆ ನಿವಾಸಿ ಲವೀನ್ ಬಿದ್ದಪ್ಪ ಅವರ ಪತ್ನಿಯಾಗಿರುವ ಕೃತಿಕಾ ತಮ್ಮ ಎಂ.ಎಡ್ ಪದವಿಯಲ್ಲಿ ಈ ಸಾಧನೆ ಮಾಡಿದ್ದು, ಇತ್ತೀಚೆಗೆ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ಪತ್ರ ಮತ್ತು ಪ್ರಶಸ್ತಿ ಸ್ವೀಕರಿಸಿದರು.
ಪ್ರಸ್ತುತ ಮೈಸೂರಿನ ಸಂತ ಜೋಸೆಫರ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.