ಮಡಿಕೇರಿ, ಜ. ೮: ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿನ ಪ್ರಾಯೋಜಕತ್ವ, ವಿಶೇಷ ಪಾಲನೆ, ಉಪಕಾರ್ ಹಾಗೂ ಮುಖ್ಯಮಂತ್ರಿ ಅವರ ಬಾಲಸೇವಾ ಯೋಜನೆಯನ್ನು ಅರ್ಹರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವ್ಯಾಪ್ತಿಯ ಪ್ರಾಯೋಜಕತ್ವ ಹಾಗೂ ಪೋಷಕತ್ವ ಅನುಮೋದನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಮಿಷನ್ ವಾತ್ಸಲ್ಯ ಮಾರ್ಗಸೂಚಿಯಂತೆ ಪ್ರಾಯೋಜಕತ್ವ ಯೋಜನೆ ಜಾರಿಗೊಳಿಸಿದ್ದು, ೧೮ ವರ್ಷದೊಳಗಿನ ಮಕ್ಕಳ ರಕ್ಷಣೆ, ಪಾಲನೆ ಮತ್ತಿತರ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಎಸ್.ಹೊನ್ನೇಗೌಡ, ಪ್ರಾಯೋಜಕತ್ವ ಯೋಜನೆಯಡಿ ೪ ಸಾವಿರ ರೂ. ನೀಡಲಾಗುತ್ತಿದ್ದು, ೨೦೨೫-೨೬ ನೇ ಸಾಲಿನ ಮೂರನೇ ತ್ರೆöÊಮಾಸಿಕಕ್ಕೆ ೧೦೨ ಅರ್ಜಿಗಳು ಸ್ವೀಕೃತವಾಗಿದ್ದು, ಈ ಅರ್ಜಿಗಳಲ್ಲಿ ೯೨ ಅರ್ಜಿಗಳು ಜಿಲ್ಲಾ ಪ್ರಾಯೋಜಕತ್ವ ಮತ್ತು ೪ನಾಲ್ಕನೇ ಪುಟಕ್ಕೆ
(ಮೊದಲ ಪುಟದಿಂದ) ಪೋಷಕತ್ವ ಅನುಮೋದನಾ ಸಮಿತಿಗೆ ಮಂಡಿಸಲಾಗಿದೆ ಎಂದರು. ವಿಶೇಷ ಪಾಲನಾ ಯೋಜನೆಯಡಿ ಅರ್ಹರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ೧೮ ವರ್ಷದೊಳಗಿನ ಮಕ್ಕಳ ರಕ್ಷಣೆ, ಪಾಲನೆ, ಪೋಷಣೆ ಮತ್ತಿತರ ಸಂಬAಧ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಉಪಕಾರ್ ಯೋಜನೆಯಡಿ ಬಾಲ ನ್ಯಾಯ ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ, ೨೦೧೫ ರಡಿ ನೋಂದಾಯಿಸಲಾಗಿರುವ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ ೧೮ ವರ್ಷ ಪೂರ್ಣಗೊಂಡು ಸಂಸ್ಥೆಯಿAದ ಬಿಡುಗಡೆಯಾದ ಮಕ್ಕಳ ಮುಂದಿನ ಪುನರ್ವಸತಿಗಾಗಿ ಹಾಗೂ ಸಮಾಜದಲ್ಲಿ ಗೌರವಯುತವಾಗಿ ಬದುಕಲು ಅನುವಾಗುವಂತೆ ಆರ್ಥಿಕ ಸ್ವಾವಲಂಬನೆಗೆ ಉಪಕಾರ್ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಮಕ್ಕಳ ರಕ್ಷಣಾ ಅಧಿಕಾರಿ ಸಚಿನ್ ಸುವರ್ಣ ಮಾತನಾಡಿ, ಉಪಕಾರ್ ಯೋಜನೆಯಡಿ ಮಾಸಿಕ ೫ ಸಾವಿರ ರೂ. ಅರ್ಹರಿಗೆ ನೀಡಲಾಗುತ್ತಿದ್ದು, ಕನಿಷ್ಠ ಮೂರು ವರ್ಷದವರೆಗೆ ಮಕ್ಕಳ ಪಾಲನೆ ಸಂಬAಧಪಟ್ಟ ಸಂಸ್ಥೆಯವರದಾಗಿರುತ್ತದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಅವರ ಬಾಲಸೇವಾ ಯೋಜನೆಯಡಿ ಕೋವಿಡ್-೧೯ ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡಿರುವ ಮಗುವಿಗೆ ೧೮ ವರ್ಷ ತುಂಬುವವರೆಗೆ ಮಾಸಿಕ ರೂ.೩,೫೦೦ ನೀಡಲಾಗುತ್ತಿದ್ದು, ಈ ಯೋಜನೆಯಡಿ ಇಬ್ಬರಿಗೆ ಸಹಾಯಧನ ದೊರೆಯುತ್ತಿದೆ ಎಂದು ಮಾಹಿತಿ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಅಂಬಿಕಾ, ಬಾಲಕಿಯರ ಬಾಲಮಂದಿರದ ಅಧೀಕ್ಷಕಿ ನಾಗರತ್ನ, ಇತರರು ಇದ್ದರು.