ಸಿದ್ದಾಪುರ, ಜ. ೮: ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಕಂಡAಗಾಲ ಗ್ರಾಮದಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಡೆದಿದೆ. ಕಂಡAಗಾಲ ಗ್ರಾಮದ ನಿವಾಸಿ ಬಲ್ಲಡಿಚಂಡ ಲೋಕನಾಥ್ ಎಂಬವರಿಗೆ ಸೇರಿದ ಹಸುವನ್ನು ಅವರ ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಸಂದರ್ಭದಲ್ಲಿ ಹುಲಿಯು ಹಸುವಿನ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿ ಕೊಂದು ಹಾಕಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ ಮೇರೆಗೆ ಸ್ಥಳಕ್ಕೆ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಂ ನೇತೃತ್ವದಲ್ಲಿ ಉಪವಲಯ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವೀರಾಜಪೇಟೆ ತಾಲೂಕು ವ್ಯಾಪ್ತಿಯ ಕಂಡAಗಾಲ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಹುಲಿಯ ಉಪಟಳ ಇರುವ ಹಿನ್ನೆಲೆಯಲ್ಲಿ ಹುಲಿಯನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು. ಕೂಡಲೇ ಹುಲಿ ಸೆರೆಗೆ ಬೋನ್ ಇಡಬೇಕೆಂದು ಆಗ್ರಹಿಸಿದರು. ಸ್ಥಳಕ್ಕೆ ತೆರಳಿದ ವಲಯ ಅರಣ್ಯ ಅಧಿಕಾರಿ ಶಿವರಾಮ್ ಗ್ರಾಮಸ್ಥರೊಂದಿಗೆ ಮಾತನಾಡಿ ಮೇಲಧಿಕಾರಿಗಳ ಬಳಿ ಚರ್ಚಿಸಿ ಇಂದಿನಿAದಲೇ ಬೋನ್ ಇಡಲಾಗುವುದೆಂದು ಭರವಸೆಯನ್ನು ನೀಡಿದರು. ಅಲ್ಲದೆ ಕಾರ್ಯಾಚರಣೆ ನಡೆಸಲಾಗುವುದೆಂದು ತಿಳಿಸಿದರು.