ಸೋಮವಾರಪೇಟೆ, ಜ. ೮: ಬಹು ದಶಕಗಳ ಬೇಡಿಕೆಯಾಗಿರುವ ಅಂತರ್ಜಿಲ್ಲಾ ಹೆದ್ದಾರಿ ಸಂಪರ್ಕಿಸುವ ದೋಣಿಗಾಲ್ - ಸೋಮವಾರಪೇಟೆ - ಮಡಿಕೇರಿ ರಸ್ತೆ ಅಭಿವೃದ್ಧಿಗೆ ಸಂಬAಧಿಸಿದAತೆ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಸಿದ್ದಪಡಿಸಲು ರೂ. ೭ ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.
ಕೆ-ಶಿಪ್-೪ ರಸ್ತೆ ನಿರ್ಮಾಣ ಕಾಮಗಾರಿಗೆ ಡಿಪಿಆರ್ ಸಿದ್ಧಪಡಿಸಲು ೭ ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಶಾಸಕರು ತಿಳಿಸಿದರು. ಡಿಪಿಆರ್ ಟೆಂಡರ್ ಪಡೆದಿರುವ ಕಂಪನಿಯ ಪ್ರತಿನಿಧಿಗಳೊಂದಿಗೆ ಬೆಂಗಳೂರಿನ ಶಾಸಕರ ಭವನದಲ್ಲಿ ಸಭೆ ನಡೆಸಿ, ಯೋಜನೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ, ಆದಷ್ಟು ಶೀಘ್ರವಾಗಿ ಡಿಪಿಆರ್ ಸಿದ್ಧಪಡಿಸುವಂತೆ ಸೂಚಿಸಿದರು.
ಕೆಶಿಪ್-೪ ಯೋಜನೆಯಡಿಯಲ್ಲಿ ಮಡಿಕೇರಿ ದೋಣಿಗಾಲ್(ರಾಷ್ಟಿçÃಯ ಹೆದ್ದಾರಿ ೭೫) ರಸ್ತೆ ಅಭಿವೃದ್ಧಿಗೆ ಕಳೆದ ಬಜೆಟ್ನಲ್ಲಿ ಘೋಷಣೆಯಾಗಿದ್ದು, ರಸ್ತೆ ಅಭಿವೃದ್ಧಿಪಡಿಸುವ ಪ್ರಕ್ರಿಯೆಗಳ ತಾಂತ್ರಿಕ ಕಾರ್ಯಗಳು ಪ್ರಾರಂಭಗೊAಡಿದೆ. ಡಿಪಿಆರ್ ಸಿದ್ಧಪಡಿಸುವ ನಿಟ್ಟಿನಲ್ಲಿ ಈಗಾಗಲೇ ೭ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕರು ತಿಳಿಸಿದರು. ಕಂಪನಿಯ ಪ್ರತಿನಿಧಿ ಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಈ ರಸ್ತೆಯಿಂದ ಕೊಡಗಿನ ಜನತೆಗೆ ಹಾಗೂ ವಾಣಿಜ್ಯೋದ್ಯಮ, ನೂತನ ಕೈಗಾರಿಕೆಗಳು, ಪ್ರವಾಸೋದ್ಯಮ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ. ಉದ್ದೇಶಿತ ಯೋಜನೆಯು ಜಿಲ್ಲೆಯ ಮಟ್ಟಿಗೆ ಬೃಹತ್ ಯೋಜನೆಯಾಗಲಿದೆ. ನಿರೀಕ್ಷಿತ ಸಮಯದಲ್ಲಿ ಡಿಪಿಆರ್ ಪೂರ್ಣಗೊಂಡು ಕಾಮಗಾರಿಗೆ ಚಾಲನೆ ನೀಡುವ ವಿಶ್ವಾಸವಿದೆ ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದ್ದಾರೆ.