ಮಡಿಕೇರಿ, ಜ. ೯: ಮಡಿಕೇರಿ-ಮಂಗಳೂರು ಹೆದ್ದಾರಿ ನಡುವಿನ ದೇವರಕೊಲ್ಲಿಯಲ್ಲಿ ಅಗ್ನಿ ಅವಘಡದಿಂದ ಲಾರಿ ಹೊತ್ತಿ ಉರಿದ ಘಟನೆ ಸಂಭವಿಸಿದೆ.

ಮೈಸೂರಿನಿಂದ ಮಂಗಳೂರಿ ಗೆ ಹಸ್ಕ್ ಸಾಗಿಸುತ್ತಿದ್ದ ಲಾರಿ ಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ವಾಹನದಲ್ಲಿದ್ದ ಚಾಲಕ ತಕ್ಷಣ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ನೋಡ ನೋಡುತ್ತ ಇಡೀ ಲಾರಿಗೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.