ಮಡಿಕೇರಿ, ಜ. ೯: ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು, ಬೆಂಗಳೂರು ಅವರ ಉಲ್ಲೇಖ ಪತ್ರದಲ್ಲಿ ಸೂಚಿಸಿರುವಂತೆ ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸುವ ಸಂಬAಧ ಕೊಡಗು ಜಿಲ್ಲೆಯ ಪೊನ್ನಂಪೇಟೆ ಉಪನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ ಹಾಗೂ ಎಸ್.ಹೆಚ್.ಸಿ.ಐ.ಎಲ್. ಮೂಲಕ ಇ-ಸ್ಟಾಂಪ್ ಮಾರಾಟ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸಹಕಾರ ಸೌಹಾರ್ದ ಸಂಸ್ಥೆಗಳ ಸಿಬ್ಬಂದಿಯವರಿಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ತಾ. ೧೦ ರಂದು (ಇಂದು) ಅಪರಾಹ್ನ ೧ ಗಂಟೆಯಿAದ ೨ ಗಂಟೆಯವರೆಗೆ ಉಪನೋಂದಣಿ ಕಚೇರಿಯ ಆವರಣದಲ್ಲಿ ತರಬೇತಿ ಆಯೋಜಿಸಲಾಗಿದೆ. ಈ ತರಬೇತಿಗೆ ಸಂಬAಧಿಸಿದವರು ಆಗಮಿಸಿ ಸದುಪಯೋಗವನ್ನು ಪಡೆದುಕೊಳ್ಳುವಂತೆ ಉಪ ನೋಂದಣಾಧಿಕಾರಿ ಕಚೇರಿಯಿಂದ ಕೋರಲಾಗಿದೆ.