ಸೋಮವಾರಪೇಟೆ, ಜ. ೮: ತಾಲೂಕಿಗೆ ಹೊಂದಿಕೊAಡಿರುವ ಗೊದ್ದು ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಹಾಗೂ ದೊಡ್ಡಯ್ಯನ ಜಾತ್ರಾ ಮಹೋತ್ಸವ ತಾ. ೧೬ ರಂದು ನಡೆಯಲಿದೆ.

ಅಂದು ಬೆಳಿಗ್ಗೆ ದೊಡ್ಡಯ್ಯನ ದೇವಾಲಯದ ಮೂಲಸ್ಥಾನದಿಂದ ಉತ್ಸವ ಮೂರ್ತಿಯನ್ನು ಬೆಳಿಗ್ಗೆ ಮೆರವಣಿಗೆಯ ಮೂಲಕ ವಾದ್ಯಗೋಷ್ಠಿಯೊಂದಿಗೆ ತಂದು ಕುಮಾರಲಿಂಗೇಶ್ವರ ದೇವಾಲಯದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗುವುದು. ನಂತರ ಸಂಜೆ ೬ಕ್ಕೆ ಪೂಜೆ ಸಲ್ಲಿಸಿದ ನಂತರ ಮೆರವಣಿಗೆಯ ಮೂಲಕ ಮೂಲಸ್ಥಾನಕ್ಕೆ ಉತ್ಸವ ಮೂರ್ತಿಯನ್ನು ಕೊಂಡೊಯ್ಯಲಾಗುವುದು.

ಬೆಳಿಗ್ಗೆ ೧೧ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಜಾತ್ರಾ ಮಹೋತ್ಸವದ ಗೌರವಾಧ್ಯಕ್ಷರಾದ ಹೆಗ್ಗಡಳ್ಳಿ ಮಠದ ಶ್ರೀ ಷಡ್ಭಾವರಹಿತೇಶ್ವರ ಶಿವಾಚಾರ್ಯ ಸ್ವಾಮೀಜಿಗಳು, ಹಾಸನ ಆದಿಚುಂಚನಗಿರಿ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಹಾಗೂ ಹೆಗ್ಗಡಳ್ಳಿ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಕಾರ್ಯಕ್ರಮದ ಪ್ರಯುಕ್ತ ತಾ. ೧೫ ರಂದು ಶ್ರೀ ಕುಮಾರಲಿಂಗೇಶ್ವರ ಮತ್ತು ದೊಡ್ಡಯ್ಯನ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ ಎಂದು ಪ್ರಮುಖರಾದ ಪಟೇಲ್ ಇಂದೂಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.