ಮಡಿಕೇರಿ, ಜ. ೮: ನಗರದ ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಮಡಿಕೇರಿಯಲ್ಲಿ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳ ದೈವಜ್ಞ ದರ್ಶನ ಕಾರ್ಯಕ್ರಮ ನಡೆಯಿತು. ನಗರದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಫಲಾನ್ಯಾಸ, ಗುರುಗಣಪತಿ ಪೂಜೆ, ಸ್ವಸ್ತಿ ಪುಣ್ಯಹವಾಚನ, ಸತ್ಯನಾರಾಯಣ ವ್ರತ ಕಥೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಮಧ್ಯಾಹ್ನ ಅನ್ನದಾನ ಏರ್ಪಡಿಸಲಾಗಿತ್ತು. ಸಂಜೆ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳು ಆಗಮಿಸಿದರು.ಬಳಿಕ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಚೌಡೇಶ್ವರಿ ದೇವಾಲಯದವರೆಗೆ ಪೂರ್ಣಕುಂಭ ಮೆರವಣಿಗೆ ನಡೆಯಿತು. ನಂತರ ಸಮಾಜದ ವತಿಯಿಂದ ಶ್ರೀಗಳಿಗೆ ಪಾದುಕಾ ಪೂಜೆ, ಶ್ರೀಗಳಿಂದ ಆಶೀರ್ವಚನ, ಫುಲಪುಷ್ಪ ಸಮರ್ಪಣೆ, ಫಲ ಮಂತ್ರಾಕ್ಷತೆ ನೆರವೇರಿತು.