ಮಡಿಕೇರಿ, ಜ. ೮: ಸೋಮವಾರಪೇಟೆ ತಾಲೂಕಿನ ತೋಳೂರು ಶೆಟ್ಟಳ್ಳಿ ಗ್ರಾ.ಪಂ. ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕುಟುಂಬಗಳಿಗೆ ಬಹಿಷ್ಕಾರ ಹಾಕಿರುವ ವಿಚಾರಕ್ಕೆ ಸಂಬAಧಿಸಿದAತೆ ಇಂದು ಅಧಿಕಾರಿ ಗಳ ತಂಡ ಬಹಿಷ್ಕೃತರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದೆ.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಶುರಾಮ್, ತೋಳೂರುಶೆಟ್ಟಳ್ಳಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹರೀಶ್ ಅವರುಗಳು ಇಂದು ಬಹಿಷ್ಕೃತ ಕುಟುಂಬ ಗಳಾದ ಅಜಂತ ಹಾಗೂ ಜೋಯಪ್ಪ ಅವರ ಮಗ ನವೀನ್ ಅವರುಗಳ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಅಜಂತ ಅವರ ಕುಟುಂಬದವರು ಮನೆಯಲ್ಲಿ ಇಲ್ಲದಿದ್ದುರಿಂದ ಅವರುಗಳನ್ನು ಸಂಪರ್ಕಿಸಿ ಕಚೇರಿಗೆ ಆಗಮಿಸಿ ಹೇಳಿಕೆ ನೀಡುವಂತೆ ಸೂಚನೆ ನೀಡಿದ್ದಾರೆ. ಇತ್ತ ಜೋಯಪ್ಪ ಹಾಗೂ ನವೀನ್ ಅವರ ಮನೆಗೂ ಅಧಿಕಾರಿಗಳು ತೆರಳಿದ್ದು, ಮನೆಯಲ್ಲಿದ್ದ ಜೋಯಪ್ಪ ಹಾಗೂ ಅವರ ಪತ್ನಿಯೊಂದಿಗೆ ಮಾತುಕತೆ ನಡೆಸಿ ಕಚೇರಿಗೆ ಬಂದು ಹೇಳಿಕೆ ನೀಡುವಂತೆ ಸೂಚನೆ ನೀಡಿದ್ದಾರೆ.
ಇದರೊಂದಿಗೆ ಗ್ರಾಮ ಸಮಿತಿಯವರಿಗೂ ಕೂಡ ಕಚೇರಿಗೆ ಆಗಮಿಸಿ ಹೇಳಿಕೆ ನೀಡುವಂತೆ ತಿಳಿಸಲಾಗಿದೆ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಶುರಾಮ್ ತಿಳಿಸಿದ್ದಾರೆ.
ಈ ಪ್ರಕರಣದ ಬಗ್ಗೆ ತಾ. ೮ ರಂದು ಶಕ್ತಿ ಪತ್ರಿಕೆಯಲ್ಲಿ ವಿಸ್ತೃತ ವರದಿ ಪ್ರಕಟ ಮಾಡಲಾಗಿದ್ದು, ಈ ಸಂಬAಧ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.