ಸೋಮವಾರಪೇಟೆ, ಜ. ೯: ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸೋಮವಾರಪೇಟೆ ಪೊಲೀಸ್ ಠಾಣೆಯ ವತಿಯಿಂದ ಪೊಲೀಸ್ ಸಿಬ್ಬಂದಿಗಳು ಪಟ್ಟಣದಲ್ಲಿ ಬೈಕ್ ಜಾಥಾ ನಡೆಸಿದರು.
ಪೊಲೀಸ್ ಇನ್ಸ್ಪೆಕ್ಟರ್ ಮುದ್ದುಮಾದೇವ, ಠಾಣಾಧಿಕಾರಿ ಗೋಪಾಲ್ ಅವರುಗಳ ನೇತೃತ್ವದಲ್ಲಿ ಠಾಣೆಯ ಮಹಿಳಾ ಸಿಬ್ಬಂದಿಗಳನ್ನೂ ಒಳಗೊಂಡAತೆ ಪೊಲೀಸರು ಹೆಲ್ಮೆಟ್ ಧರಿಸಿ ಪಟ್ಟಣದಲ್ಲಿ ಬೈಕ್ ಜಾಥಾ ಮಾಡಿದರು.ದ್ವಿಚಕ್ರ ವಾಹನ ಚಾಲನೆ ಸಂದರ್ಭ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಜಾಗೃತಿ ಮೂಡಿಸಿದ ಸಿಬ್ಬಂದಿಗಳು, ವಾಹನ ಚಾಲನೆ ಸಂದರ್ಭ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕರೆ ನೀಡಿದರು. ಇನ್ಸ್ಪೆಕ್ಟರ್ ಮುದ್ದುಮಾದೇವ, ಠಾಣಾಧಿಕಾರಿ ಗೋಪಾಲ್ ಅವರುಗಳೂ ಸಹ ಹೆಲ್ಮೆಟ್ ಧರಿಸಿ, ಬೈಕ್‌ನಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು. ಪಟ್ಟಣದ ಕ್ಲಬ್ ರಸ್ತೆ, ಮಡಿಕೇರಿ ರಸ್ತೆ, ಸಿ.ಕೆ. ಸುಬ್ಬಯ್ಯ ರಸ್ತೆ, ಮುಖ್ಯ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಯಿತು.