ಹೆಚ್.ಕೆ. ಜಗದೀಶ್
ಗೋಣಿಕೊಪ್ಪಲು, ಜ. ೧೦: ದಿನದಿಂದ ದಿನಕ್ಕೆ ಶರವೇಗದಲ್ಲಿ ಬೆಳೆಯುತ್ತಿರುವ ವಾಣಿಜ್ಯ ನಗರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲು ಹಾಗೂ ಟ್ರಾಫಿಕ್ ವ್ಯವಸ್ಥೆಯ ಮೇಲೆ ಹದ್ದಿನ ಕಣ್ಣಿಡಲು ಇದೀಗ ಗೋಣಿಕೊಪ್ಪಲು ವೃತ್ತ ನಿರೀಕ್ಷಕರ ಕಚೇರಿಯಲ್ಲಿ ದಿನದ ೨೪ ಗಂಟೆ ಕಾರ್ಯ ನಿರ್ವಹಿಸುತ್ತಿರುವ ೩೬೦ ಡಿಗ್ರಿಯ ಸಿಸಿ ಕ್ಯಾಮರಾ ವೀಕ್ಷಿಸಬಹುದಾಗಿದೆ. ಕೇವಲ ಓರ್ವ ಪೊಲೀಸ್ ಸಿಬ್ಬಂದಿಯಿAದ ನಗರದ ಸಂಪೂರ್ಣ ಚಿತ್ರಣವನ್ನು ಕ್ಯಾಮರಗಳ ಮೂಲಕ ಕುಳಿತಲ್ಲಿಯೇ ನಿಯಂತ್ರಿಸಬಹುದಾಗಿದೆ.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಈ ಯೋಜನೆಗೆ ಅನುದಾನವನ್ನು ಒದಗಿಸಿದ್ದಾರೆ. ಸಿಸಿ ಕ್ಯಾಮರಾಗಳ ನಿಯಂತ್ರಣ ಹಾಗೂ ಜವಾಬ್ದಾರಿಯನ್ನು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ. ನಗರದ ಬಸ್ ನಿಲ್ದಾಣ ಸೇರಿದಂತೆ ಆಯಕಟ್ಟಿನ ಜಾಗಗಳಲ್ಲಿ ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿವೆ.
ಅತ್ಯಾಧುನಿಕ ಮಾದರಿಯ ದಿನದ ೨೪ ಗಂಟೆ ಕೆಲಸ ನಿರ್ವಹಿಸುವ ೩೬೦ ಡಿಗ್ರಿ ಸುತ್ತುವ ಸಿಸಿ ಕ್ಯಾಮರಾಗಳನ್ನು ಅಳವಡಿಸುವ ಮೂಲಕ ಗೋಣಿಕೊಪ್ಪ ಬಸ್ ನಿಲ್ದಾಣ, ಪೊನ್ನಂಪೇಟೆ ರಸ್ತೆ ಜಂಕ್ಷನ್, ಬೈಪಾಸ್ ರಸ್ತೆ ಜಂಕ್ಷನ್, ಉಮಾಮಹೇಶ್ವರಿ ದೇವಾಲಯ ಬಳಿಯಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನಗರದಲ್ಲಿ ಟ್ರಾಫಿಕ್ ವ್ಯವಸ್ಥೆ, ಅಂಗಡಿ ಮಳಿಗೆ ಕಳ್ಳತನ ಸೇರಿದಂತೆ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಇನ್ನಿತರ ಕಾನೂನುಬಾಹಿರ ಚಟುವಟಿಕೆಗಳು ಇತ್ತೀಚಿನ ದಿನದಲ್ಲಿ ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಗೋಣಿಕೊಪ್ಪ ವೃತ್ತ ನಿರೀಕ್ಷಕ ಶಿವರಾಜ್ ಮುಧೋಳ್ ಸಿಸಿ ಕ್ಯಾಮರಾ ಅಳವಡಿಕೆಗೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ಗಮನ ಸೆಳೆದಿದ್ದರು. ಪೊಲೀಸ್ ಅಧಿಕಾರಿಗಳು ನೀಡಿದ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಶಾಸಕ ಪೊನ್ನಣ್ಣ ಅನುದಾನ ನೀಡುವ ಮೂಲಕ ನಗರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಪೂರಕವಾದ ರೀತಿಯಲ್ಲಿ ಸಹಕರಿಸಿದ್ದಾರೆ. ಈಗಾಗಲೇ ಅತ್ಯಾಧುನಿಕ ಮಾದರಿಯ ೧೨ ಸಿಸಿ ಕ್ಯಾಮರಾಗಳನ್ನು ಪ್ರಮುಖ ದಿಕ್ಕುಗಳಲ್ಲಿ ಅಳವಡಿಸಲಾಗಿದೆ. ಸಿಸಿ ಕ್ಯಾಮರಾವು ದಿನದ ೨೪ ಗಂಟೆ ಕಾರ್ಯ ನಿರ್ವಹಿಸುತ್ತಿದ್ದು ಬಸ್ ನಿಲ್ದಾಣದಲ್ಲಿ ಅಳವಡಿಸಿರುವ ಕ್ಯಾಮರಾ ೩೬೦ ಡಿಗ್ರಿ ಕಾರ್ಯ ನಿರ್ವಹಿಸುತ್ತಿದೆ. ಬಸ್ ನಿಲ್ದಾಣದ ಸುತ್ತಮುತ್ತಲಿನಲ್ಲಿ ನಡೆಯುವ ವಿದ್ಯಮಾನಗಳು, ಪೊಲೀಸರ ಕರ್ತವ್ಯ ನಿರ್ವಹಣೆ, ಆಟೋ ರಿಕ್ಷಾಗಳ ಅಡ್ಡಾದಿಡ್ಡಿ ಸಂಚಾರ, ಟ್ರಾಫಿಕ್ ಸಮಸ್ಯೆಗಳನ್ನು ಗೋಣಿಕೊಪ್ಪ ನಗರದ ವೃತ್ತ ನಿರೀಕ್ಷಕರ ಕಚೇರಿಯಲ್ಲಿಯೇ ಸಂಪೂರ್ಣವಾಗಿ ವೀಕ್ಷಿಸಬಹುದಾಗಿದೆ.
ನಗರ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಿಸಿ ಕ್ಯಾಮರವೂ ಬಹುಮುಖ್ಯ ಪಾತ್ರ ವಹಿಸುತ್ತಿದೆ. ಇತ್ತೀಚೆಗೆ ವೀರಾಜಪೇಟೆಯಲ್ಲಿ ನಡೆದ ೪ ಕೋಟಿ ಹಣ ದರೋಡೆ ಪ್ರಕರಣವನ್ನು ಗೋಣಿಕೊಪ್ಪದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದ ಮೂಲಕವೇ ಪತ್ತೆಹಚ್ಚಿ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಸಿಸಿ ಕ್ಯಾಮರಾಗಳ ಕಾರ್ಯನಿರ್ವಹಣೆಯನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿಯೇ ಪೊಲೀಸ್ ಅಧಿಕಾರಿಗಳು, ಠಾಣಾಧಿಕಾರಿಗಳು ವೀಕ್ಷಿಸಬಹುದಾಗಿದೆ.
ಸಿಸಿ ಕ್ಯಾಮರಾ ಅಳವಡಿಕೆಯಿಂದ ಮುಖ್ಯರಸ್ತೆ ಸೇರಿದಂತೆ ನಗರದ ಬೈಪಾಸ್, ಪೊನ್ನಂಪೇಟೆ ರಸ್ತೆ, ಮಾರ್ಕೆಟ್ ರಸ್ತೆಗಳಲ್ಲಿ ಸಂಭವಿಸಬಹುದಾದ ಅಪಘಾತಗಳು ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ಕಂಡು ಹಿಡಿಯಲು ಪೊಲೀಸರಿಗೆ ಸಹಾಯವಾಗುತ್ತಿದೆ. ಸುರಕ್ಷತೆ ಹಾಗೂ ಅಪರಾಧ ಪತ್ತೆ ವಿಚಾರದಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆ ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೈಗೊಂಡ ಯೋಜನೆಯನ್ನು ನಾಗರಿಕರು ಪ್ರಶಂಸಿಸಿದ್ದಾರೆ. ಬೆಳೆಯುತ್ತಿರುವ ನಗರಗಳಲ್ಲಿ ಜನರ ಸುರಕ್ಷತಾ ದೃಷ್ಟಿಯಿಂದ ಹಾಗೂ ಅಪರಾಧ ಪತ್ತೆಹಚ್ಚಲು ಪೊಲೀಸರಿಗೆ ಇದರಿಂದ ಹೆಚ್ಚಿನ ಸಹಕಾರಿಯಾಗಲಿದೆ ಎಂಬುದನ್ನು ನಿರೀಕ್ಷಿಸಲಾಗಿದೆ.