ಮಡಿಕೇರಿ, ಜ.೧೦ : ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ತಾ.೧೮ ರಂದು ನಡೆಯಲಿರುವ “ಸಂಕ್ರಾAತಿ ಸಂಭ್ರಮ” ಕ್ರಿಕೆಟ್ ಪಂದ್ಯಾವಳಿಯ ಲೋಗೋ ಅನಾವರಣ ನಡೆಯಿತು.
ಸುಂಟಿಕೊಪ್ಪ ಸಮೀಪದ ೭ನೇ ಹೊಸಕೋಟೆಯಲ್ಲಿರುವ ನೇಚರ್ ಪಾರ್ಕ್ ಹೋಂ ಸ್ಟೇಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಲೋಗೋ ಅನಾವರಣ ಮಾಡಲಾಯಿತು.
ಈ ಸಂದರ್ಭ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ., ಸ್ಥಾಪಕಾಧ್ಯಕ್ಷ ಎಸ್.ಎ. ಮುರಳೀಧರ್, ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಖಜಾಂಚಿ ಟಿ.ಕೆ. ಸಂತೋಷ್, ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಿ.ವಿ. ರವಿಕುಮಾರ್, ಕಾರ್ಯದರ್ಶಿ ಅರುಣ್ ಕೂರ್ಗ್ ಸೇರಿದಂತೆ ಸಂಘದ ನಿರ್ದೇಶಕರು ಹಾಗೂ ಸದಸ್ಯರು ಇದ್ದರು.
ತಾ.೧೮ ರಂದು ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲ್ಪಟ್ಟಿರುವ “ಸಂಕ್ರಾAತಿ ಸಂಭ್ರಮ” ಕ್ರಿಕೆಟ್ ಪಂದ್ಯಾವಳಿಯಲ್ಲಿ ಇದೇ ಮೊದಲ ಬಾರಿಗೆ (ರಾಜಕಾರಣಿಗಳು) ಶಾಸಕಾಂಗ ಹಾಗೂ (ಅಧಿಕಾರಿ ವರ್ಗ) ಕಾರ್ಯಾಂಗದ ನಡುವೆ ಸೌಹಾರ್ದ ಪಂದ್ಯಾವಳಿ ನಡೆಯಲಿದೆ. ಪಂದ್ಯಾವಳಿಯಲ್ಲಿ ಕೊಡಗು ಪತ್ರಕರ್ತರ ಸಂಘದ “ಹೊನ್ನು, ಸುಗ್ಗಿ, ಸಿರಿ, ಸಮೃದ್ಧಿ” ಹೆಸರಿನ ನಾಲ್ಕು ತಂಡಗಳು ಭಾಗವಹಿಸಲಿವೆ.