ಸೋಮವಾರಪೇಟೆ, ಜ.೧೦ : ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಅರ್.ಎನ್. ಬಿಂದುಮಣಿ ಅವರು ತಾಲೂಕಿನ ಸೋಮವಾರಪೇಟೆ ಹಾಗೂ ಶನಿವಾರಸಂತೆ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಕಾನೂನು ಸುವ್ಯವಸ್ಥೆ, ಆಡಳಿತ, ಮೂಲಭೂತ ಸೌಕರ್ಯ ಹಾಗೂ ಸುಧಾರಣಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಠಾಣೆಗಳ ಕಾರ್ಯಚಟುವಟಿಕೆ ಪರಿಶೀಲಿಸಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು. ಠಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸುವುದೂ ಸೇರಿದಂತೆ ಪೊಲೀಸ್ ಹೊರ ಠಾಣೆಗಳ ನಿರ್ವಹಣೆ ಸಂಬAಧ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ವರಿಷ್ಠಾಧಿಕಾರಿಗಳ ಭೇಟಿ ಸಂದರ್ಭ ಎರಡೂ ಠಾಣೆಗಳ ಪೊಲೀಸ್ ಇನ್ಸ್ಪೆಕ್ಟರ್‌ಗಳು, ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.