ಮಡಿಕೇರಿ, ಜ. ೧೨: ದೇವರಕೊಲ್ಲಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ನೂತನವಾಗಿ ಉದ್ದೇಶಿತ ಶ್ರೀ ಚಾಮುಂಡೇಶ್ವರಿ ಕಲಾಭವನಕ್ಕೆ ಭೂಮಿಪೂಜೆ ಮತ್ತು ಮಕರ ಸಂಕ್ರಾAತಿ ಪೂಜಾಮಹೋತ್ಸವ ತಾ. ೧೪ ರಂದು ನಡೆಯಲಿದೆ.
ಅಂದು ಬೆಳಗ್ಗೆ ೧೦.೪೫ ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಕಲಾಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.
ಪೂರ್ವಾಹ್ನ ೧೧ ಗಂಟೆಗೆ ಆಯೋಜಿತ ಸಭಾಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಲಿದ್ದು, ಟಿ.ಶ್ಯಾಮ್ ಭಟ್, ಶ್ರೀ ಚಾಮುಂಡೇಶ್ವರಿ ದೇವಾಲಯದ ಅಧ್ಯಕ್ಷರಾದ ಯಶೋಧರ ಬಿ.ಜೆ. ಹಾಜರಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ., ಮೈಸೂರಿನ ಉದ್ಯಮಿ ನರೇಶ ಚೆರಿಯಮನೆ, ಮದೆನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧನಂಜಯ್ ಅಗೋಳಿಕಜೆ, ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಂಪಾಜೆ ವಲಯಾಧಿಕಾರಿ ಸಂತೋಷ್ ಕುಮಾರ್, ಶ್ರೀ ಚಾಮುಂಡೇಶ್ವರಿ ದೇವಾಲಯದ ಉಪಾಧ್ಯಕ್ಷ ರಾಜು ಕೆ.ಆರ್. ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ ೧೨.೩೦ ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದ್ದು, ಮಧ್ಯಾಹ್ನ ೧ ಗಂಟೆಯಿAದ ಅನ್ನಸಂತರ್ಪಣೆ ಜರುಗಲಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.