ಸಿದ್ದಾಪುರ, ಜ. ೧೨: ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಇಬ್ಬರು ಯುವತಿಯರು ಸೇರಿ ಐವರನ್ನು ಬಂಧಿಸಲಾಗಿದೆ.

ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡು ರಸ್ತೆಯಲ್ಲಿ ಗಾಂಜಾ ಸೇವನೆ ಮಾಡುತ್ತಿರುವ ಕುರಿತು ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿ ೨ ಮಹಿಳೆ ಸೇರಿ ಐದು ಮಂದಿಯನ್ನು ಬಂಧಿಸಿದ್ದಾರೆ. ಅಪ್ಸಲ್(೨೯), ಭವಿತಾ (೨೨), ಗಿರಿಜಾ (೨೦), ಶಿವು (೨೬) ನಿಖಿಲ್ (೨೫) ಬಂಧಿತ ಆರೋಪಿಗಳು.

ಬಂಧಿತರು ಸಿದ್ದಾಪುರ ಹಾಗೂ ನೆಲ್ಲಿಹುದಿಕೇರಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ. ಕಾರ್ಯಾಚರಣೆಯಲ್ಲಿ ಸಿದ್ದಾಪುರದ ಅಪರಾಧ ಪತ್ತೆ ದಳದ ಸಿಬ್ಬಂದಿಗಳಾದ ಮಣಿಕಂಠ, ಪ್ರಸನ್ನ, ಅಭಿ ಪಾಲ್ಗೊಂಡಿದ್ದರು. ಆರೋಪಿಗಳ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.