ಮಡಿಕೇರಿ, ಜ. ೧೨: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ ಲೇಖಕಿ ಪೂಜಾರಿರ ಕೃಪಾ ದೇವರಾಜ್ ಬರೆದ ‘ಮಂತ್ರ ಪುಷ್ಪ -ಕಥೆಗಳ ಕ್ಯಾನ್ವಾಸ್’ ಕೃತಿ ಪಡೆದುಕೊಂಡಿದೆ.

ಈ ದತ್ತಿಯನ್ನು ಗೌರಮ್ಮ ಅವರ ಪುತ್ರ ಬಿ.ಜಿ.ವಸಂತ ಅವರು ಸ್ಥಾಪಿಸಿದ್ದು, ಕೊಡಗಿನ ಮಹಿಳಾ ಲೇಖಕಿಯರು ಪ್ರಕಟಪಡಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಇದುವರೆಗೆ ೨೨ ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಪಾ ದೇವರಾಜ್ ಹಲವು ಪುಸ್ತಕಗಳನ್ನು ರಚಿಸಿದ್ದು, ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.