ಮಡಿಕೇರಿ, ಜ.೧೨: ಕಳೆದ ಬಾರಿಯಂತೆ ಈ ಬಾರಿಯೂ ಸಹ ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿದರು.

ಕಳೆದ ಬಾರಿಯಂತೆ ಈ ಬಾರಿಯು ಸಹ ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ವಿವಿಧ ಉಪ ಸಮಿತಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.

ಗಣರಾಜ್ಯೋತ್ಸವವನ್ನು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಅಥವಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಶಾಲೆಗಳ ವಿವರ ತಿಳಿಸಬೇಕು. ಜೊತೆಗೆ ರಿಹರ್ಸಲ್‌ನ್ನು ಮಾಡಿಕೊಳ್ಳಬೇಕು. ಶಾಲೆಯಲ್ಲಿಯೇ ಅಗತ್ಯ ತರಬೇತಿ ಪಡೆದು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಸಂಬAಧ ಸ್ತಬ್ಧಚಿತ್ರ ಏರ್ಪಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಹಿಂದಿನAತೆಯೇ ಕ್ರಮವಹಿಸಬೇಕು. ವೇದಿಕೆ ನಿರ್ಮಾಣ, ಸೇರಿದಂತೆ ಹಲವು ಕಾರ್ಯಕ್ರಮಗಳ ಸಂಬAಧ ಗಮನಹರಿಸುವಂತೆ ಹೆಚ್ಚುವರಿ ಅವರು ಸಲಹೆ ಮಾಡಿದರು.

ವಿವಿಧ ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಕ್ರಮಗಳ ಸಂಬAಧ ತಾ. ೧೪ ರೊಳಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಪ್ರಶಸ್ತಿ ವಿತರಣೆ ಇದ್ದಲ್ಲಿ ೧೬ ರೊಳಗೆ ಮಾಹಿತಿ ನೀಡುವಂತಾಗಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಸಂಬAಧಿಸಿದAತೆ ಜನವರಿ, ೨೧ ರೊಳಗೆ ಲಿಖಿತವಾಗಿ ಮಾಹಿತಿ ನೀಡುವಂತೆ ಹೇಳಿದರು.

ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಅವರು ಮಾತನಾಡಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಈ ಸಂಬAಧ ಅಗತ್ಯ ಸಿದ್ಧತೆಯನ್ನು ಶಾಲೆಯಲ್ಲಿಯೇ ವಿದ್ಯಾರ್ಥಿಗಳು ಮಾಡಿಕೊಳ್ಳಬೇಕು. ಮೈದಾನದ ಮಧ್ಯಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದರು. ವೇದಿಕೆ ನಿರ್ಮಾಣ ಮಾಡುವ ಸಂದರ್ಭದಲ್ಲಿಯೂ ಸಹ ಸೂಕ್ತ ಜಾಗದಲ್ಲಿ ನಿರ್ಮಿಸಬೇಕು ಎಂದು ಅವರು ಸಲಹೆ ಮಾಡಿದರು.

ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಸ್ತಬ್ಧ ಚಿತ್ರ ಸಂಬAಧ ಗಮನಹರಿಸಲಾಗುವುದು ಎಂದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವ ಸಂಬAಧ ಅಗತ್ಯ ಕ್ರಮವಹಿಸಲಾಗುವುದು. ಈ ಸಂಬAಧ ರಿಹರ್ಸಲ್ ನಡೆಸಲಾಗುವುದು ಎಂದು ಹೇಳಿದರು.

ಲೋಕೋಪಯೋಗಿ, ಕಂದಾಯ, ಪಂಚಾಯತ್ ರಾಜ್, ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು, ಕೃಷಿ, ತೋಟಗಾರಿಕೆ, ಪಶುಪಾಲನೆ, ಕನ್ನಡ ಮತ್ತು ಸಂಸ್ಕೃತಿ ಹೀಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಕಾರ್ಯಕ್ರಮ ಆಯೋಜನೆಗೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಜೊತೆಗೂಡಿ ಕಾರ್ಯನಿರ್ವಹಿಸಬೇಕು ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ, ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಪೌರಾಯುಕ್ತ ಎಚ್.ಆರ್.ರಮೇಶ್, ತಹಶೀಲ್ದಾರ್ ಶ್ರೀಧರ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ ಜಿ.ಕೆ.ನಾಯಕ್, ಲೀಡ್ ಬ್ಯಾಂಕ್ ವ್ಯವಸ್ಥಾಪಕÀ ಗಂಗಾಧರ್ ನಾಯಕ್, ಜಿಲ್ಲಾ ಪರಿಸರ ಅಧಿಕಾರಿ ರಘುರಾಮ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಎಂಜಿನಿಯರ್ ಪ್ರಭು, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಮ್ಮಿ ಸ್ವಿಕ್ವೇರಾ, ಭೂದಾಖಲೆಗಳ ಉಪನಿರ್ದೇಶಕ ನಿರಂಜನ, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.