ಮಡಿಕೇರಿ, ಜ.೧೨: ತಾಳತ್ತಮನೆ ನೇತಾಜಿ ಯುವಕ ಮಂಡಲ ಹಾಗೂ ಯುವತಿ ಮಂಡಳಿ ವತಿಯಿಂದ ಮೈ ಭಾರತ್, ಕೊಡಗು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಯುವ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಭಾರತದ ಮಹಾನ್ ಸ್ವಾತಂತ್ರö್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೯ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಮತ್ತು ಯುವತಿ ಮಂಡಲದ ೩೪ನೇ ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಟ, ಜಿಲ್ಲಾ ಮಟ್ಟದ ಮಹಿಳೆಯರ ಹಗ್ಗಜಗ್ಗಾಟ, ಮ್ಯಾರಾಥಾನ್ ಹಾಗೂ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮವು ತಾ. ೨೩ ರಂದು ತಾಳತ್ತಮನೆ ಆಟದ ಮೈದಾನದಲ್ಲಿ ನಡೆಯಲಿದೆ.