ಸಿದ್ದಾಪುರ, ಜ. ೧೨: ಪಾಲಿಬೆಟ್ಟ ಪದವಿಪೂರ್ವ ಕಾಲೇಜಿನಲ್ಲಿ ಸಿದ್ದಾಪುರ ಠಾಣಾಧಿಕಾರಿ ನೇತೃತ್ವದಲ್ಲಿ ರಸ್ತೆ ಸುರಕ್ಷತೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮಾತನಾಡಿ, ವಾಹನ ಚಾಲಕರು ಮದ್ಯಪಾನ ಮಾಡಿ ವಾಹನಗಳನ್ನು ಚಾಲನೆ ಮಾಡಿದ್ದು ಕಂಡುಬAದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದಲ್ಲದೆ ಅಪ್ರಾಪ್ತರು ವಾಹನ ಚಾಲನೆ ಮಾಡಿಕೊಂಡು ಏನಾದರೂ ಘಟನೆಗಳು ಸಂಭವಿಸಿದಲ್ಲಿ ಹಾಗೂ ವಾಹನ ಚಾಲನೆ ಮಾಡಿದ್ದಲ್ಲಿ ಅಂತವರಿಗೆ ದಂಡ ವಿಧಿಸಲಾಗುವುದೆಂದು ತಿಳಿಸಿದರು.
ವಾಹನ ಪರವಾನಗಿ ಇಲ್ಲದೆ ವಾಹನಗಳನ್ನು ಚಾಲನೆ ಮಾಡಬಾರದೆಂದು ಮಾಹಿತಿ ನೀಡಿದರು. ಶಾಲಾ-ಕಾಲೇಜು ಮಕ್ಕಳು ದುಶ್ಚಟಗಳಿಂದ ದೂರ ಇರಬೇಕೆಂದರು. ಮಾದಕ ವಸ್ತುಗಳನ್ನು ಬಳಸಬಾರದೆಂದು ಕಿವಿಮಾತು ಹೇಳಿದರು. ಓದಿನ ಕಡೆಗೆ ಹೆಚ್ಚು ಗಮನಹರಿಸುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.