ಮಡಿಕೇರಿ, ಜ. ೧೨: ರಾಜ್ಯದ ಎನ್.ಎಚ್-೨೭೫ ಹೆದ್ದಾರಿ ಸುರಕ್ಷತೆಗಾಗಿ ಕೇಂದ್ರ ಸರ್ಕಾರದಿಂದ ರೂ.೯೪.೦೮ ಕೋಟಿ ಬೃಹತ್ ಯೋಜನೆಗೆ ತಾಂತ್ರಿಕ ಅನುಮೋದನೆ ನೀಡಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕರ್ನಾಟಕದ ಅತ್ಯಂತ ಜನನಿಬಿಡ ಹೆದ್ದಾರಿಗಳಲ್ಲಿ ಒಂದಾದ ಎನ್.ಎಚ್-೨೭೫ (ಬಂಟ್ವಾಳ-ಬೆAಗಳೂರು ವಿಭಾಗ) ರಸ್ತೆಯ ಅಭಿವೃದ್ಧಿಗಾಗಿ (ಸಂಪಾಜೆಯಿAದ ಕುಶಾಲನಗರ ವರೆಗೆ) ಭರ್ಜರಿ ಕೊಡುಗೆ ನೀಡಿದ್ದು ಈ ರಸ್ತೆ ಅಭಿವೃದ್ಧಿ ಕಾಣಲಿದೆ ಎಂದಿದ್ದಾರೆ.
ಈ ಹೆದ್ದಾರಿಯ ಆಯ್ದ ಭಾಗಗಳಲ್ಲಿ ರಕ್ಷಣಾತ್ಮಕ ಗೋಡೆಗಳ ನಿರ್ಮಾಣ ಮತ್ತು ಸುರಕ್ಷತಾ ಕಾಮಗಾರಿಗಳಿಗಾಗಿ ೯೪.೦೮ ಕೋಟಿ ರೂಪಾಯಿಗಳ ಆರ್ಥಿಕ ಮತ್ತು ತಾಂತ್ರಿಕ ಮಂಜೂರಾತಿಯನ್ನು ನೀಡಿ ಆದೇಶ ಹೊರಡಿಸಲಾಗಿದೆ. ಬಂಟ್ವಾಳ ಮತ್ತು ಬೆಂಗಳೂರು ನಡುವಿನ ಈ ಘಟ್ಟ ಪ್ರದೇಶದ ರಸ್ತೆಯು ಮಳೆಗಾಲದಲ್ಲಿ ಪದೇ ಪದೇ ಭೂಕುಸಿತಕ್ಕೆ ತುತ್ತಾಗುತ್ತಿತ್ತು. ಇದನ್ನು ತಡೆಗಟ್ಟಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಲು ಹೆದ್ದಾರಿಯ ಕಿಮೀ ೭೮ ರಿಂದ ೧೨೫ ವರೆಗಿನ (ಸಂಪಾಜೆಯಿAದ ಕುಶಾಲನಗರ ವರೆಗೆ) ವ್ಯಾಪ್ತಿಯಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.
ಈ ಯೋಜನೆಯನ್ನು (ಇಟಿgiಟಿeeಡಿiಟಿg, Pಡಿoಛಿuಡಿemeಟಿಣ, ಚಿಟಿಜ ಅoಟಿsಣಡಿuಛಿಣioಟಿ) ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತದೆ.
ಪ್ರಮುಖ ಕಾಮಗಾರಿಗಳು
ರಕ್ಷಣಾತ್ಮಕ ಗೋಡೆಗಳು: ಒಟ್ಟು ೧,೬೫೦ ಮೀಟರ್ ಉದ್ದದ ಆರ್‌ಸಿಸಿ ಕ್ಯಾಂಟಿಲಿವರ್ ರಿಟೈನಿಂಗ್ ವಾಲ್ ಮತ್ತು ಕಣಿವೆಯ ಬದಿಯಲ್ಲಿ ವಿಶೇಷವಾಗಿ ೧೧೦ ಮೀಟರ್ ಉದ್ದದ ಪ್ರೆಶರ್ ರಿಲೀಫ್ ಗೋಡೆಗಳನ್ನು ನಿರ್ಮಿಸಲಾಗುವುದು.
ಬ್ರೆಸ್ಟ್ ವಾಲ್ ಮತ್ತು ಚರಂಡಿ: ಗುಡ್ಡದ ಬದಿಯಲ್ಲಿ ಮಣ್ಣು ಕುಸಿಯದಂತೆ ೧,೯೧೦ ಮೀಟರ್ ಉದ್ದದ ಬ್ರೆಸ್ಟ್ ವಾಲ್ ಮತ್ತು ನೀರು ಸರಾಗವಾಗಿ ಹರಿಯಲು ೨,೭೨೦ ಮೀಟರ್ ಉದ್ದದ ಚೂಟ್ ಡ್ರೈನ್‌ಗಳನ್ನು ನಿರ್ಮಿಸಲಾಗುತ್ತದೆ.
ತಿರುವುಗಳ ಸುಧಾರಣೆ: ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ೧೭ ಆಯ್ದ ಸ್ಥಳಗಳಲ್ಲಿ ಒಟ್ಟು ೧,೬೯೦ ಮೀಟರ್ ಉದ್ದದ ರಸ್ತೆಯನ್ನು ವಿಸ್ತರಿಸಲಾಗುತ್ತದೆ.
ಮೋರಿಗಳ ಪುನರ್ನಿರ್ಮಾಣ: ಕಿಮೀ ೭೭.೭೫ ಮತ್ತು ೮೯.೬೭ ರಲ್ಲಿ ಹಳೆಯದಾದ ಎರಡು ಬಾಕ್ಸ್ ಮೋರಿಗಳನ್ನು ಮರುನಿರ್ಮಾಣ ಮಾಡಲಾಗುವುದು.
ಸುರಕ್ಷತಾ ಕ್ರಮಗಳು: ರಕ್ಷಣಾತ್ಮಕ ಕ್ರಾಶ್ ಬ್ಯಾರಿಯರ್‌ಗಳು ಮತ್ತು ಆಧುನಿಕ ಸಂಚಾರ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು .
ರೂ. ೯೪.೦೮ ಕೋಟಿ (ಜಿಎಸ್‌ಟಿ ಮತ್ತು ನಿರ್ವಹಣಾ ವೆಚ್ಚಗಳು ಸೇರಿ). ವೆಚ್ಚದ ಯೋಜನೆಯು ಮಳೆಗಾಲವನ್ನೂ ಒಳಗೊಂಡAತೆ ೧೮ ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ. ಗುತ್ತಿಗೆದಾರರು ಕಾಮಗಾರಿ ಮುಗಿದ ನಂತರ ಮುಂದಿನ ೧೦ ವರ್ಷಗಳ ಕಾಲ ರಸ್ತೆಯ ದೋಷ ಹೊಣೆಗಾರಿಕೆ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ಸಂಸದರು ಮಾಹಿತಿ ಹಂಚಿಕೊAಡಿದ್ದಾರೆ.
ಯೋಜನೆಯ ಗುಣಮಟ್ಟ ಕಾಪಾಡಲು ಸಚಿವಾಲಯವು ಹಲವು ಷರತ್ತುಗಳನ್ನು ವಿಧಿಸಿದೆ. ಕಾಮಗಾರಿ ಆರಂಭಿಸುವ ಮುನ್ನ ಮತ್ತು ನಂತರ ನೆಟ್‌ವರ್ಕ್ ಸರ್ವೆ ವೆಹಿಕಲ್ ಮೂಲಕ ರಸ್ತೆಯ ಗುಣಮಟ್ಟವನ್ನು ದಾಖಲಿಸುವುದು ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದAತೆ ಏಕಕಾಲಕ್ಕೆ ೩ ಕಿಮೀ ಗಿಂತ ಹೆಚ್ಚು ಉದ್ದದ ಕಾಮಗಾರಿ ನಡೆಸದಂತೆ ಸೂಚಿಸಲಾಗಿದೆ. ಈ ಯೋಜನೆಯು ಪೂರ್ಣಗೊಂಡ ನಂತರ, ಬೆಂಗಳೂರು ಮತ್ತು ಕರಾವಳಿ ಭಾಗದ ನಡುವಿನ ಸಂಚಾರವು ಹವಾಮಾನ ವೈಪರೀತ್ಯಗಳ ಸಂದರ್ಭದಲ್ಲೂ ಹೆಚ್ಚು ಸುರಕ್ಷಿತ ಮತ್ತು ಸುಗಮವಾಗಲಿದೆ. ಕಾಮಗಾರಿಗೆ ಮಡಿಕೇರಿ ಸಮೀಪದಲ್ಲಿ ಜನವರಿ ಕೊನೆಯ ವಾರದಂದು ಚಾಲನೆ ನೀಡುವುದಾಗಿ ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.