ಮಡಿಕೇರಿ,ಜ.೧೨: ಕೃಷಿ ಇಲಾಖೆ ವತಿಯಿಂದ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವು ಜನವರಿ ೧೩ ರಂದು ಬೆಳಗ್ಗೆ ೭.೩೦ ಗಂಟೆಗೆ ಉದ್ಘಾಟನೆಯಾಗಲಿದೆ. ಕಾಲ್ನಡಿಗೆ ಜಾಥಾ ಕಾರ್ಯಕ್ರಮವು ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನದವರೆಗೆ ಆಯೋಜಿಸಲಾಗಿದೆ. “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ (ಲ್ಯಾಂಡ್ ರೇಸಸ್ ಪ್ರೋಡಕ್ಟ್÷್ಸ ಪಾಕ ಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ತಾ. ೧೩ ರಂದು ಬೆಳಗ್ಗೆ ೧೧ ಗಂಟೆಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೆಎಸ್‌ಎಫ್‌ಸಿ ಕಟ್ಟಡ, ಇಂಡಸ್ಟ್ರೀಯಲ್ ಏರಿಯಾ, ಮಡಿಕೇರಿ ಇಲ್ಲಿ ನಡೆಯಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.