ಮಡಿಕೇರಿ, ಜ. ೧೩: ಹಾಲಿ ವೀರಾಜಪೇಟೆ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಸರಕಾರದಲ್ಲಿ ಪ್ರಭಾವಿಯೂ ಆಗಿರುವ ಎ.ಎಸ್. ಪೊನ್ನಣ್ಣ ಅವರು ಇದೇನಪ್ಪಾ ರಾಜಕೀಯ ಜಂಜಾಟವೇ ಬೇಡ ಎಂದು ನಿರ್ಧರಿಸಿಬಿಟ್ಟರೇ ಎಂದು ಹುಬ್ಬೇರಿಸಬೇಡಿ...! ಇದು ತಾತ್ಕಾಲಿಕವಷ್ಟೆ. ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಇವರು ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಪೊನ್ನಣ್ಣ ಅವರು ಅತಿಥಿ ಉಪನ್ಯಾಸಕರಾಗಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಚುನಾವಣೆ ಹಾಗೂ ಚುನಾವಣಾ ನೀತಿಗಳು ಮತ್ತು ಪ್ರಜಾಪ್ರಭುತ್ವ ಆಡಳಿತ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದ ಶಾಸಕರು, ಸಂವಿಧಾನ ಹಾಗೂ ಪ್ರಜಾಪ್ರಭು ತ್ವದ ಮಹತ್ವ ಹಾಗೂ ಚುನಾವಣೆ ಪ್ರಕ್ರಿಯೆಗಳ ರೀತಿ -ನೀತಿಗಳ ಬಗ್ಗೆ ವಿಸ್ತಾರವಾಗಿ ವಿವರಿಸಿ ಯುವ ವಕೀಲರ ಜೊತೆ ಸಂವಾದ ನಡೆಸಿದರು. ಭಾರತೀಯರಾದ ನಮಗೆ ೪ನಾಲ್ಕನೇ ಪುಟಕ್ಕೆ
(ಮೊದಲ ಪುಟದಿಂದ) ನಮ್ಮ ಸಂವಿಧಾನ ನೀಡಿದ ಅತ್ಯಂತ ಮಹತ್ವದ ವಿಷಯವೇ ಪ್ರಜಾಪ್ರಭುತ್ವ ಆಡಳಿತ. ಇಲ್ಲಿ ಪ್ರಜೆಗಳು ತಮ್ಮನ್ನು ಆಳಬೇಕಾಗಿರುವ ವ್ಯಕ್ತಿಯನ್ನು ಆಯ್ಕೆ ಮಾಡಲು ಸಂಪೂರ್ಣ ಸ್ವಾತಂತ್ರ‍್ಯರು ಮತ್ತು ದೇಶದ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡರೆ, ಇದು ಅತ್ಯಂತ ಮಹತ್ವದ ಹಾಗೂ ಗುರುತರ ಜವಾಬ್ದಾರಿ ಆಗಿರುತ್ತದೆ. ವಕೀಲರಿಗೆ ಸಂವಿಧಾನವನ್ನು ಹಾಗೂ ಪ್ರಜಾಪ್ರಭುತ್ವವನ್ನು ಉಳಿಸುವ ಮಹತ್ವದ ಜವಾಬ್ದಾರಿ ಇದೆ. ಇದನ್ನು ಎಲ್ಲರೂ ಯಶಸ್ವಿಯಾಗಿ ನಿಭಾಯಿಸಬೇಕೆಂದು ಅವರು ಹೇಳಿದರು. ಪ್ರಜಾಪ್ರಭುತ್ವ, ಆಡಳಿತದ ಮಹತ್ವ ಹಾಗೂ ಕಾನೂನುಗಳನ್ನು ಅವರು ಈ ಸಂದರ್ಭದಲ್ಲಿ ವಿವರಿಸಿದರು.