ಕೂಡಿಗೆ, ಜ. ೧೩: ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ವೈಜ್ಞಾನಿಕ ಹಾಗೂ ಔದ್ಯಮಿಕ ಸಂಶೋಧನಾ ಪರಿಷತ್ ಅಡಿಯಲ್ಲಿರುವ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ಜೊತೆಗೆ ಕೊಡಗು ವಿಶ್ವವಿದ್ಯಾಲಯವು ಪರಸ್ಪರ ಒಡಂಬಡಿಕೆ ಮಾಡಿಕೊಂಡಿದೆ.

ಮೂಲತಃ ಆಹಾರ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಷ್ಟç ಮಟ್ಟದಲ್ಲಿ ಸಂಶೋಧನಾ ಕೇಂದ್ರವಾಗಿ ಕಾರ್ಯನಿರ್ವಹಿಸುವ ಉದ್ದೇಶದೊಂದಿಗೆ ಆರಂಭಗೊAಡಿರುವ ಸಂಸ್ಥೆಯ ಜೊತೆಗೆ ಮುಂದಿನ ದಿನಗಳಲ್ಲಿ ಕೊಡಗು ವಿಶ್ವವಿದ್ಯಾಲಯವು ಪರಸ್ಪರ ಸಂಶೋಧನೆ, ಬೋಧನೆ, ಕೌಶಲ್ಯ, ಅಭಿವೃದ್ಧಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ, ತಂತ್ರಜ್ಞಾನ ವಿನಿಮಯ ಮಾಡಿಕೊಂಡು ಕೊಡಗು ವಿಶ್ವವಿದ್ಯಾಲಯದ ಅಧ್ಯಾಪಕ ವೃಂದದವರಿಗೆ ಮತ್ತು ವಿದ್ಯಾರ್ಥಿಗಳಿಗೆ ಪೂರಕವಾಗಿರುವ ಸೌಲಭ್ಯಗಳನ್ನು ಹಾಗೂ ಹಲವಾರು ರೀತಿಯ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವ ಮುಖ್ಯ ಉದ್ದೇಶದಿಂದ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಹಾಗೂ ಮೈಸೂರಿನ ಸಿಎಫ್‌ಟಿಆರ್‌ಐ ಸಂಸ್ಥೆಯ ನಿರ್ದೇಶಕರಾದ ಡಾ. ಪಿ. ಗಿರಿಧರ್ ಅವರು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಆಹಾರ ಕ್ಷೇತ್ರಕ್ಕೆ ಸಂಬAಧಿಸಿದAತೆ ವಿವಿಧ ಆಯಾಮಗಳಲ್ಲಿ ವಿನೂತನ ಸಂಶೋಧನೆಗೆ ಹೊಸ ದಿಕ್ಕು, ಹೊಸ ಅವಿಷ್ಕಾರದ ಜೊತೆಗೆ ಉದ್ಯೋಗಾವಕಾಶಗಳನ್ನು ಕಂಡುಕೊಳ್ಳುವುದಕ್ಕೆ ಸಾಧ್ಯವಾಗಲಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ತಿಳಿಸಿದ್ದಾರೆ.