ಸುಂಟಿಕೊಪ್ಪ, ಜ. ೧೩: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವದಲ್ಲಿ ಕೊಡಗಿನ ವಿದ್ಯಾರ್ಥಿನಿ ಬಿ.ಪಿ.ಕೃತಿಕಾ ಸ್ನಾತಕೋತ್ತರ ಪದವಿಯನ್ನು ಮೊದಲ ರ್ಯಾಂಕ್ನೊAದಿಗೆ ಪಡೆದಿದ್ದು, ೫ ಚಿನ್ನದ ಪದಕಗಳು ಮತ್ತು ೧ ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ.
ಮೂಲತಃ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿ ಗ್ರಾಮ ನಿವಾಸಿ ನಿವೃತ್ತ ಎ.ಎಸ್.ಐ ಪಾರ್ಥ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಗೀತಾ ಪಾರ್ಥ ಅವರ ಪುತ್ರಿ . ಪೊನ್ನಂಪೇಟೆ ನಿವಾಸಿ ಲವೀನ್ ಬಿದ್ದಪ್ಪ ಅವರ ಪತ್ನಿಯಾಗಿರುವ ಕೃತಿಕಾ ತಮ್ಮ ಎಂ.ಎಡ್ ಪದವಿಯಲ್ಲಿ ಈ ಸಾಧನೆ ಮಾಡಿದ್ದು ಇತ್ತೀಚೆಗೆ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ಪತ್ರ ಮತ್ತು ಪ್ರಶಸ್ತಿ ಸ್ವೀಕರಿಸಿದರು.