ಮಡಿಕೇರಿ, ಜ. ೧೩: ಇಂದು ಕೊಡಗು ಬಿಜೆಪಿ ಪ್ರಮುಖರೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸಭೆ ನಡೆಸಿದರು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಸದಾನಂದಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ, ಛಲವಾದಿ ನಾರಾಯಣಸ್ವಾಮಿ, ಸಂಸದ ಯದುವೀರ್ ಒಡೆಯರ್, ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಅಪ್ಪಚ್ಚು ರಂಜನ್, ಎಂಎಲ್‌ಸಿ ಸುಜಾ ಕುಶಾಲಪ್ಪ, ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ, ಪ್ರಮುಖರಾದ ರವಿಕುಮಾರ್, ಪ್ರೀತಮ್ ಗೌಡ, ರಾಜೀವ್, ಗೋವಿಂದ ಕಾರಜೋಳ, ಕೊಡಗು ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ಸೇರಿದಂತೆ ಕೊಡಗು ಬಿಜೆಪಿ ಪ್ರಮುಖರು ಭಾಗವಹಿಸಿದ್ದರು.