ಸೋಮವಾರಪೇಟೆ, ಜ. ೧೩: ತಾಲೂಕು ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವುದು ಮತ್ತು ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ೨೦೨೬-೨೭ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ರೂ. ೯೦ ಕೋಟಿ ಅನುದಾನ ಮೀಸಲಿಡಬೇಕೆಂದು ಶಾಸಕ ಡಾ. ಮಂತರ್ ಗೌಡ ಅವರು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರಸ್ತಾವನೆ ಸಲ್ಲಿಸಿದರು. ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯು ತಾಲೂಕು ಕೇಂದ್ರದಲ್ಲಿದ್ದು, ಈಗಿರುವ ಬಹುತೇಕ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ. ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಆಗಮಿಸುತ್ತಿದ್ದು, ಪ್ರಸ್ತುತ ೧೦೦ ಹಾಸಿಗೆಗಳ ಸಾಮರ್ಥ್ಯವನ್ನು ಮಾತ್ರ ಹೊಂದಿದೆ. ಈ ಹಿನ್ನೆಲೆ ಸರ್ಕಾರಿ ಆಸ್ಪತ್ರೆಯನ್ನು ೪ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ೨೫೦ ಬೆಡ್‌ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಹಾಗೂ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ರೂ. ೯೦ ಕೋಟಿ ಅನುದಾನ ಮೀಸಲಿಡಬೇಕೆಂದು ಶಾಸಕ ಡಾ.ಮಂತರ್ ಗೌಡ ರವರು ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರಿಗೆ ಪ್ರಸ್ತಾವನೆ ಸಲ್ಲಿಸಿದರು.