ಸಿದ್ದಾಪುರ, ಜ. ೧೩: ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿ ಬುಡಕಟ್ಟು ಕಾರ್ಮಿಕರ ಸಂಘಟನೆಯ ವತಿಯಿಂದ ಹೊಸೂರು ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಯಿತು. ಸಂಘದ ಅಧ್ಯಕ್ಷ ವೈ.ಬಿ. ಗಪ್ಪು ಮಾತನಾಡಿ, ಕಳತ್ಮಾಡು ಗ್ರಾಮದಲ್ಲಿ ಇರುವ ೩.೩೦ ಎಕರೆ ಸರ್ಕಾರಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡು ವಾಸವಿರುವ ನಿವೇಶನ ರಹಿತ ಕುಟುಂಬಗಳಿಗೆ ಸಮರ್ಪಕವಾಗಿ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು. ನೂರಾರು ಕುಟುಂಬಗಳು ಶಾಶ್ವತ ಸೂರು ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೆ ಜನಪ್ರತಿನಿಧಿಗಳು ಹಾಗೂ ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಸ್ಪಂದಿಸಿ ಬಡವರ್ಗದ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬುಡಕಟ್ಟು ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಜೆ.ಸಿ. ಲಲಿತ, ಜ್ಯೋತಿ, ವಿನಯ್ ಕುಮಾರ್, ಆದಿವಾಸಿ ಮುಖಂಡ ಜೆ.ಟಿ.ಅಯ್ಯಪ್ಪ ಇನ್ನಿತರರು ಹಾಜರಿದ್ದರು.