ಮಡಿಕೇರಿ, ಜ. ೧೩: ಕೊಡಗು ಪ್ರೆಸ್‌ಕ್ಲಬ್‌ನ ನಿರ್ದೇಶಕರಾಗಿ ಎಚ್.ಸಿ.ಜಯಪ್ರಕಾಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ಮಾಡಲಾಯಿತು.