ವೀರಾಜಪೇಟೆ, ಜ. ೧೪: ಸಾಮಾಜಿಕ ಜಾಲತಾಣದಲ್ಲಿ ಕೊಡಗಿನ ಯುವತಿಯರ ಬಗ್ಗೆ ಅವಹೇಳನಕಾರಿ ಜಾಹೀರಾತು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ವೀರಾಜಪೇಟೆ ನಾಗರಿಕ ಸಮಿತಿ ಮತ್ತು ಸಾಮಾಜಿಕ ಕಾರ್ಯಕರ್ತರ ಸಂಯುಕ್ತ ವೇದಿಕೆ ವೀರಾಜಪೇಟೆ ನಗರ ಠಾಣೆಗೆ ದೂರು ನೀಡಿದೆ.

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣ ಇನ್ಸಾ÷್ಟಗ್ರಾಮ್‌ನಲ್ಲಿ ಕೊಡಗಿನ ಹೆಣ್ಣು ಮಕ್ಕಳು ಸಿಗುತ್ತಾರೆ ಎಂಬ ಅವಹೇಳನಕಾರಿ ಜಾಹೀರಾತನ್ನು ನೀಡುತ್ತಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಮಿತಿಯ ಸಹ ಸಂಚಾಲಕ ಮಾಳೇಟಿರ ಎಸ್. ಕಾಳಯ್ಯ ಅವರ ನೇತೃತ್ವದಲ್ಲಿ ವೀರಾಜಪೇಟೆಯ ಪೊಲೀಸ್ ಉಪಾಧೀಕ್ಷಕರಿಗೆ ಹಾಗೂ ನಗರ ಠಾಣೆಯ ಉಪನಿರೀಕ್ಷಕರಿಗೆ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಚೇಂದAಡ ಮಿಥುನ್, ಚೆಟ್ಟೋಳಿರ ಶರತ್ ಸೋಮಣ್ಣ ಹಾಜರಿದ್ದರು.