ಮದೆನಾಡು, ಜ. ೧೪: ವೀರಾಜಪೇಟೆಯ ಕುಟುಂಬವೊAದು ಧರ್ಮಸ್ಥಳದಲ್ಲಿ ಕಾರ್ಯಕ್ರಮವೊಂದಕ್ಕೆ ಓಮ್ನಿ ಕಾರಿನಲ್ಲಿ (ಏಂ ೧೨ Z ೪೮೯೯) ತೆರಳುತ್ತಿದ್ದಾಗ ಮಂಗಳೂರು ರಾಷ್ಟಿçÃಯ ಹೆದ್ದಾರಿಯ ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತಿದ್ದ ಏಳು ಜನರ ಪೈಕಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಳುಗಳನ್ನು ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ಸಾಗಿಸಲಾಗಿದೆ.