ಮಡಿಕೇರಿ, ಜ. ೧೪: ತಾ. ೨೮ ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಹಾಗೂ ತಾ. ೩೦ ರಂದು ಹುತಾತ್ಮರ ದಿನ ಸಂಬAಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಅವರು ರಾಷ್ಟçದ ಪ್ರಥಮ ಸೇನಾ ಮಹಾ ದಂಡನಾಯಕ, ವೀರ ಸೇನಾನಿ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜೀವನಚರಿತ್ರೆ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸುವಂತಾಗಬೇಕು. ಸೈನಿಕ ಶಾಲೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳನ್ನು ಆಹ್ವಾನಿಸುವುದು, ನಗರದಲ್ಲಿರುವ ಮಹನಿಯರ ಪ್ರತಿಮೆಗಳಿಗೆ ಹೂವಿನ ಅಲಂಕಾರ ಮಾಡುವಂತೆ ಸೂಚಿಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ಬಳಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಗಣ್ಯರನ್ನು ಆಹ್ವಾನಿಸುವುದು ಸೇರಿದಂತೆ ಹಲವು ಕಾರ್ಯವನ್ನು ನಿರ್ವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷÀ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನಾಚರಣೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾದ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜಯಂತಿ ಕಾರ್ಯಕ್ರಮದಲ್ಲಿ ಸರ್ವಜನರೂ ಪಾಲ್ಗೊಳ್ಳುವಂತಾಗಬೇಕು. ರಾಷ್ಟçದ ಸೇನಾ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದು ಹೇಳಿದರು.

ತಾ. ೩೦ ರಂದು ಹುತಾತ್ಮರ ದಿನ ಆಯೋಜನೆ ಬಗ್ಗೆ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಅಂದು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ಹೊರ ತೆಗೆದು ಹೂವಿನ ಅಲಂಕೃತದೊAದಿಗೆ ವಿಶೇಷ ಪೂಜೆ ಸಲ್ಲಿಸಿ, ಪೊಲೀಸ್ ವಾದ್ಯದೊಂದಿಗೆ ಗೌರವ ಸಲ್ಲಿಸಿ, ನಂತರ ಜಿಲ್ಲಾಡಳಿತ ಭವನದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ಮೂಲಕ ಸಾಗಿ ಗಾಂಧಿ ಮಂಟಪದಲ್ಲಿ ಸರ್ವ ಧರ್ಮ ಪ್ರಾರ್ಥನಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ನಂತರ ಪೊಲೀಸ್ ವಾದ್ಯದೊಂದಿಗೆ ಗೌರವ ವಂದನೆ ಸಲ್ಲಿಸಿ, ಜಿಲ್ಲಾ ಖಜಾನೆಯಲ್ಲಿ ಚಿತಾಭಸ್ಮವನ್ನು ಭದ್ರವಾಗಿ ಇಡಲಾಗುತ್ತದೆ. ಈ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಚೊಟ್ಟೆಯಂಡ ಸಂಜು ಕಾವೇರಪ್ಪ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಕಾನೆಹಿತ್ಲು ಮೊಣ್ಣಪ್ಪ, ತಹಶೀಲ್ದಾರ್ ಶ್ರೀಧರ, ಓಂಕಾರೇಶ್ವರ ದೇವಾಲಯದ ಆಡಳಿತಾಧಿಕಾರಿ ದೇವರಾಜು, ಅಂಬೆಕಲ್ಲು ನವೀನ್, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಮ್ಮಿ ಸಿಕ್ವೇರಾ, ನಗರಸಭೆಯ ನಿಶಾ ಸೇರಿದಂತೆ ಇತರರು ಹಲವು ಸಲಹೆ ನೀಡಿದರು.