ಮಡಿಕೇರಿ ಜ.೧೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂಪಾಜೆ ಗ್ರಾಮ ಪಂಚಾಯಿತಿ ಹಾಗೂ ಸಂಪಾಜೆ ಶ್ರೀ ಪಂಚಲಿAಗೇಶ್ವರ ದೇವಸ್ಥಾನ ಸಮಿತಿ ಸಹಯೋಗದೊಂದಿಗೆ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವು ತಾ. ೧೭ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಸಂಪಾಜೆ ಶ್ರೀ ಪಂಚಲಿAಗೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಶಾಸಕ ಡಾ. ಮಂತರ್‌ಗೌಡ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ರಮಾದೇವಿ ಕಳಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಸಂಪಾಜೆ ಶ್ರೀ ಪಂಚಲಿAಗೇಶ್ವರ ದೇವಸ್ಥಾನದ ಅಧ್ಯಕ್ಷ ಜಯಕುಮಾರ್ ಚಿದ್ಕಾರು, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಸಂಪಾಜೆ ಹೋಬಳಿ ಕಂದಾಯ ಪರಿವೀಕ್ಷಕರಾದ ಬಿ.ಜಿ.ವೆಂಕಟೇಶ್, ಇತರರು ಪಾಲ್ಗೊಳ್ಳಲಿದ್ದಾರೆ.