ಮಡಿಕೇರಿ, ಜ. ೧೬: ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವ ತನಕ ಆಯಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಶಿವಕುಮಾರ್ ಆದೇಶಿಸಿದ್ದಾರೆ.
ಗ್ರಾ.ಪಂ. ಒಳಗೊಂಡAತೆ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರ ಅವಧಿಯು ೫ ವರ್ಷಗಳಿಗೆ ಅಸ್ತಿತ್ವದಲ್ಲಿದ್ದು, ೨೦೨೬ರ ಜನವರಿ, ಫೆಬ್ರವರಿ, ಮಾರ್ಚ್ ವೇಳೆಯಲ್ಲಿ ವಿವಿಧ ದಿನಾಂಕಗಳAದು ಅವಧಿ ಮುಕ್ತಾಯಗೊಳ್ಳಲಿದೆ. ೨೦೨೬-೨೦೩೧ರ ಅವಧಿಗಾಗಿ ಗ್ರಾ.ಪಂ.ಗಳಿಗೆ ಚುನಾವಣೆ ನಡೆದು ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಆಯಾ ಪಂಚಾಯಿತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ರಡಿ ಜಿಲ್ಲಾಧಿಕಾರಿಗಳು ಆಡಳಿತಾಧಿಕಾರಿಗಳನ್ನು ನೇಮಿಸಲು ಅವಕಾಶವಿದ್ದು, ಇದರನ್ವಯ ಜಿಲ್ಲಾಧಿಕಾರಿಗಳು ಸಂಬAಧಪಟ್ಟ ಗ್ರಾ.ಪಂ.ಗಳ ಅವಧಿ ಪರಿಶೀಲಿಸಿ ಅಧಿಕಾರ ಅವಧಿ ಮುಕ್ತಾಯಗೊಳ್ಳುವ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಿ ಅಧಿಸೂಚಿಸುವಂತೆ ಸೂಚಿಸಿದ್ದಾರೆ.