ಪೊನ್ನಂಪೇಟೆ, ಜ. ೧೬: ದೇಶದ ಭವಿಷ್ಯವಾಗಿರುವ ಯುವಜನತೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸುವ ಮೂಲಕ ದೇಶವನ್ನು ಸದೃಢವಾಗಿ ಮುನ್ನಡೆಸಲು ಪಣತೊಡಬೇಕು ಎಂದು ಗೋಣಿಕೊಪ್ಪಲು ಕಾವೇರಿ ಕಾಲೇಜು ಪ್ರಾಂಶುಪಾಲ ಎಸ್.ಎಸ್ ಮಾದಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟಿçÃಯ ಯುವ ದಿನಾಚರಣೆ ಅಂಗವಾಗಿ ಮಾತನಾಡಿದ ಅವರು ಯುವಕರ ಪಾಲಿನ ಸ್ಪೂರ್ತಿಯ ಚಿಲುಮೆ, ಭವ್ಯ ಭಾರತದ ಹೆಮ್ಮೆಯ ಪುತ್ರ ಸ್ವಾಮಿ ವಿವೇಕಾನಂದರು ಜನಿಸಿದ ಪುಣ್ಯ ದಿನವನ್ನು ರಾಷ್ಟಿçÃಯ ಯುವ ದಿನ ಎಂದು ಆಚರಿಸುತ್ತೇವೆ.

ವಿವೇಕಾನಂದರ ಚಿಂತನೆಗಳು ಸಾರ್ವಕಾಲಿಕವಾಗಿದ್ದು, ಇವುಗಳನ್ನು ಪಾಲನೆ ಮಾಡಬೇಕು. ಇಂದಿನ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನದ ಗುಂಗಿನಲ್ಲಿ ನಮ್ಮ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ.

ಇಡೀ ವಿಶ್ವಕ್ಕೆ ಮಾದರಿಯಾದ ನಮ್ಮ ದೇಶದ ಸಂಸ್ಕೃತಿಯನ್ನು ಯಾರು ಕೂಡ ಮರೆಯಬಾರದು. ದೇಶಕ್ಕಾಗಿ ಶ್ರಮಿಸಿದಂತಹ ಮಹನೀಯರ ಜೀವನ ಚರಿತ್ರೆ ಓದುವ ಮೂಲಕ ವಿದ್ಯಾರ್ಥಿಗಳು ಶಿಸ್ತು, ಸಂಯಮ ಬೆಳೆಸಿಕೊಂಡು ಕಠಿಣ ಪರಿಶ್ರಮದಿಂದ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭ ಹಿರಿಯ ಉಪನ್ಯಾಸಕ ಕ್ಯಾಪ್ಟನ್ ಬೈಟ ಕುಮಾರ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕ ಡಾ. ಲೆಫ್ಟಿನೆಂಟ್ ಎಂ. ಆರ್. ಅಕ್ರಂ, ಎನ್.ಎಸ್.ಎಸ್ ಅಧಿಕಾರಿ ಚೇತನ್ ಚಿಣ್ಣಪ್ಪ, ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.