ಮಡಿಕೇರಿ, ಜ. ೧೬: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ-ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಧಾರಾವಾಡ, ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಆಸಕ್ತ ಯುವನಿಧಿ ಯೋಜನೆಯಡಿಯಲ್ಲಿನ ಫಲಾನುಭವಿಗಳಿಗೆ ನಾಲ್ಕು ವಾರಗಳ ಕೌಶಲ್ಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ (ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಗ್)ವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಫಲಾನುಭವಿಗಳಿಗೆ ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿAದ ದೊರೆಯುವ ನೆರವು, ಪ್ರೋತ್ಸಾಹ, ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮುಂತಾದ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.

ಆಸಕ್ತ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಲು ಕೋರಿದೆ. ಭಾಗವಹಿಸುವವರು ತಾ.೨೦ ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ, ದೂ.ಸಂ. ೭೭೬೦೧೪೫೭೮೪, ೮೩೧೦೭೩೮೮೧೯ ವಿಳಾಸದಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದು ಅಥವಾ ಕರೆ ಮೂಲಕ ಹೆಸರು ನೋಂದಾವಣೆ ಮಾಡಿಕೊಳ್ಳಲು ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ, ದೂ.ಸಂ.೭೭೬೦೧೪೫೭೮೪, ೮೩೧೦೭೩೮೮೧೯ ನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.