ಕೂಡಿಗೆ, ಜ. ೧೬: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೫-೨೬ನೇ ಸಾಲಿನ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಿ.ಟಿ. ಶೋಭ ಅವರ ಅಧ್ಯಕ್ಷತೆಯಲ್ಲಿ ತೊರೆನೂರು ಬಯಲು ರಂಗಮAದಿರ ಸಭಾಂಗಣದಲ್ಲಿ ನಡೆಯಿತು.

ಸಭೆಯ ಆರಂಭದಲ್ಲಿ ಹಿಂದಿನ ಸಭೆಯ ನಡಾವಳಿಗಳ ವರದಿಯನ್ನು ಸಭೆಗೆ ಮಂಡನೆ ಮಾಡುವ ಸಂದರ್ಭದಲ್ಲಿ ಹಿಂದಿನ ಗ್ರಾಮ ಸಭೆಯ ನಿರ್ಣಯಗಳನ್ನು ಅನುಷ್ಠಾನಗೊಳಿಸುವಂತೆ ಗ್ರಾಮಸ್ಥರುಗಳಾದ ಟಿ.ಕೆ. ಪಾಂಡುರAಗ, ಅಳುವಾರ ಮೂರ್ತಿ, ಶಿವಣ್ಣ, ಪ್ರಕಾಶ್, ಪಿ.ಡಿ. ರವಿ, ವಸಂತ್ ಮಂಜುನಾಥ ಸೇರಿದಂತೆ ಹಲವು ಮಂದಿ ಆಗ್ರಹಿಸಿದರು.

ಸಭೆಯಲ್ಲಿ ಹಾಜರಿದ್ದ ಕಂದಾಯ, ಅಬಕಾರಿ, ವಿದ್ಯುತ್, ಅರಣ್ಯ, ಪಶುಪಾಲನಾ ಇಲಾಖೆ, ನೀರಾವರಿ ಇಲಾಖೆ, ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಸವಲತ್ತುಗಳ ಬಗ್ಗೆ ಮತ್ತು ಕಾಮಗಾರಿಗಳÀ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ತಮ್ಮ ಗ್ರಾಮಗಳಲ್ಲಿ ಇನ್ನೂ ನಡೆಯಬೇಕಾದ ಕಾಮಗಾರಿ, ಯೋಜನೆಯ ಅನುಷ್ಠಾನದ ನಿರ್ಣಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಜಿ.ಟಿ. ಶೋಭ ಮಾತನಾಡಿ, ಗ್ರಾಮ ಸಭೆಯಲ್ಲಿ ಚರ್ಚೆಗೊಂಡ ವಿಷಯಗಳನ್ನು ಈಗಾಗಲೇ ಗ್ರಾಮ ಪಂಚಾಯಿತಿ ನೋಂದಣಿ ಪುಸ್ತಕದಲ್ಲಿ ನೋಂದಾಯಿಸಲಾಗಿದೆ. ಅದರ ಮುಖೇನ ಸಂಬAಧಿಸಿದ ಇಲಾಖೆಯವರಿಗೆ ಗ್ರಾಮ ಪಂಚಾಯತಿ ವತಿಯಿಂದ ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ವಾರ್ಡ್ ಸಭೆಯ ಸ್ವೀಕೃತವಾದ ಕಾಮಗಾರಿಗಳ ಅನುಮೋದನೆ ಪಡೆಯಲಾಯಿತು. ಅಭಿವೃದ್ಧಿ ಅಧಿಕಾರಿ ಶ್ಯಾಮ್ ಸರಕಾರದ ಹೊಸ ಯೋಜನೆಗಳ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ರೂಪ ಮಹೇಶ್, ಸದಸ್ಯರಾದ ಶಿವಕುಮಾರ್, ದೇವರಾಜ್, ಮಹದೇವ, ಯೋಶೋದ, ಸಾವಿತ್ರಿ, ನಿಂಗಾಜಮ್ಮ, ತೊರೆನೂರು ಸಹಕಾರ ಸಂಘದ ಅಧ್ಯಕ್ಷ ಟಿ.ಕೆ. ಜಗದೀಶ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಸಂಜೀವಯ್ಯ, ಅಭಿವೃದ್ಧಿ ಅಧಿಕಾರಿ ಶ್ಯಾಮ್ ಸೇರಿದಂತೆ ತೊರೆನೂರು, ಅಳುವಾರ, ಸಿದ್ದಲಿಂಗಪುರ, ಅರಸಿನಗುಪ್ಪೆ, ಬಸರಿನಗುಪ್ಪೆ ಸೇರಿದಂತೆ ಉಪ ಗ್ರಾಮಗಳ ಗ್ರಾಮಸ್ಥರು ಹಾಜರಿದ್ದರು. ಶ್ಯಾಮ್ ಸ್ವಾಗತಿಸಿ, ವಂದಿಸಿದರು