ಮಡಿಕೇರಿ ಜ. ೧೭: ಕೊಡಗು ಪತ್ರಕರ್ತರ ಸಂಘ ಮತ್ತು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ತಾ.೧೮ ರಂದು (ಇಂದು) ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಕ್ರಾAತಿ ಸಂಭ್ರಮ ಕ್ರಿಕೆಟ್ ಪಂದ್ಯಾಟ ಆಯೋಜಿತವಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮತ್ತು ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ. ರವಿಕುಮಾರ್ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ ೧೦ ಗಂಟೆಗೆ ಕ್ರಿಕೆಟ್ ಪಂದ್ಯಾಟವನ್ನು ಶಾಸಕರಾದ ಎ.ಎಸ್. ಪೊನ್ನಣ್ಣ, ಎಂ.ಪಿ. ಸುಜಾಕುಶಾಲಪ್ಪ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೋಜ್ ಖಾನ್ ಪಾಲ್ಗೊಳ್ಳಲಿರುವ ಸಭಾ ಕಾರ್ಯಕ್ರಮವನ್ನು ಸಮಾಜಸೇವಕರು, ಉದ್ಯಮಿಗಳಾದ ನಾಪಂಡ ಮುತ್ತಪ್ಪ, ನಾಪಂಡ ಮುದ್ದಪ್ಪ ಉದ್ಘಾಟಿಸಲಿದ್ದಾರೆ. ಕ್ರೀಡಾಪಟುಗಳ ಜೆರ್ಸಿಯನ್ನು ಉದ್ಯಮಿ, ಸಮಾಜಸೇವಕ ಎಡಕೇರಿ ಪ್ರಸನ್ನ ಅನಾವರಣಗೊಳಿಸಲಿದ್ದಾರೆ. ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ನಗರಸಭಾಧ್ಯಕ್ಷೆ ಕಲಾವತಿ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಕರ್ನಾಟಕ ಕ್ರಿಕೆಟ್ ಅಕಾಡೆಮಿ ಸಂಚಾಲಕ ಚೇನಂಡ ಪೃಥ್ವಿ ದೇವಯ್ಯ ಹೈಕೋರ್ಟ್ ಹಿರಿಯ ವಕೀಲ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಚಂದ್ರಮೌಳಿ, ಉದ್ಯಮಿ ಕೇಶವಪ್ರಸಾದ್ ಮುಳಿಯ, ಮಾಜಿ ಶಾಸಕಿ ಶಾಂತೆಯAಡ ವೀಣಾ ಅಚ್ಚಯ್ಯ ಸಮಾಜಸೇವಕ ಹರಪಳ್ಳಿ ರವೀಂದ್ರ, ವೀರಾಜಪೇಟೆಯ ಉದ್ಯಮಿ ಶೇಖ್ ಇಮ್ರಾನ್ ಸಿದ್ದಿಕಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ. ರಾಜೇಶ್, ಯುವಜನ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ವಿಸ್ಮಯಿ ಚಕ್ರವರ್ತಿ , ಕೆ.ನಿಡುಗಣೆ ಗ್ರಾ.ಪಂ. ಸದಸ್ಯ ಜಾನ್ಸನ್ ಪಿಂಟೋ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಸಂಜೆ ೪ ಗಂಟೆಗೆ ಆಯೋಜಿತ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ, ಶಕ್ತಿ ಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್, ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಟಿ.ಪಿ. ರಮೇಶ್, ಬಿ. ಜಿ. ಅನಂತಶಯನ, ಸಂಘದ ಸ್ಥಾಪಕಾಧ್ಯಕ್ಷರಾದ ಎಸ್.ಎ.ಮುರಳೀಧರ್, ಕೊಡಗು ಅಭಿವೃದ್ಧಿ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಎA. ದಾವುದ್, ಕೆಪಿಸಿಸಿ ಸದಸ್ಯ ಕೆ.ಎ.ಯಾಕೂಬ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ, ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಖಜಾಂಜಿ ಟಿ. ಕೆ. ಸಂತೋಷ್, ಕ್ಷೇಮಾಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಅರುಣ್ ಕೂರ್ಗ್, ಸಂಘದ ಉಪಾಧ್ಯಕ್ಷ ಕವನ್ ಕಾರ್ಯಪ್ಪ, ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು, ಸೋಮಾವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ಹರೀಶ್ ಕುಮಾರ್, ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುಧೋಷ್ ಪೂವಯ್ಯ, ಪೊನ್ನಂಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜ್ ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ. ರಾಜಕಾರಣಿಗಳು ಮತ್ತು ಅಧಿಕಾರಿಗಳ ತಂಡದ ನಡುವೆ ಪ್ರದರ್ಶನ ಪಂದ್ಯಾಟ ಆಯೋಜಿತವಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.