ಮಡಿಕೇರಿ, ಜ. ೧೭: ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಆಗುವ ಕುಂಡಾಮೇಸ್ತಿçà ಮತ್ತು ಕೂಟುಹೊಳೆಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಶನಿವಾರ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ. ಬಸಪ್ಪ, ಪೌರಾಯುಕ್ತರಾದ ಎಚ್.ಆರ್. ರಮೇಶ್, ಇಂಜಿನಿಯರ್‌ಗಳಾದ ಸತೀಶ್, ಹೇಮಂತ್ ಕುಮಾರ್, ಪ್ರಸನ್ನ ಇತರರು ಇದ್ದರು.