ಸೋಮವಾರಪೇಟೆ, ಜ. ೧೭: ಪಟ್ಟಣದ ಎಸ್‌ಜೆಎಂ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಪ್ರಥಮ್, ಕುಶಾಲನಗರದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ವಿಶೇಷಚೇತನ ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಕ್ರೀಡಾಕೂಟದಲ್ಲಿ ಭಾರದ ಗುಂಡು ಎಸೆತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಬಿಲ್ಲೆ ಎಸೆತ ಹಾಗೂ ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ.