ಜನವರಿ, ಜ. ೧೭: ಮಡಿಕೇರಿಯ ಮಂಗಳಾದೇವಿ ನಗರದಲ್ಲಿರುವ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.

ಶ್ರೀ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗ ದೇವರುಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ೨ ದಿನಗಳ ಕಾಲ ನಡೆಯಿತು.

ಮೊದಲ ದಿನ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ದಿ, ರಾಕ್ಷೆÆÃಘ್ನ ಹೋಮ, ವಾಸ್ತುಪೂಜೆ, ವಾಸ್ತುಹೋಮ, ದಿಶಾಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆದು ಮರುದಿನ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ ಪೂಜೆ, ಆಶ್ಲೇಷ ಬಲಿ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ನಡೆದು ಸಂಜೆ ಸಾಯಂಪೂಜೆ, ರಂಗಪೂಜೆ, ಬಲಿ ಉತ್ಸವ, ರಾಜಾಂಗಣ ಪ್ರಸಾದ, ಪೀಠಪೂಜೆ, ಶುದ್ಧಿಕಲಶಾಭಿಷೇಕ, ಮಂತ್ರಾಕ್ಷತೆ ಕೈಂಕರ್ಯಗಳು ನೆರವೇರಿದವು. ನಗರ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು.