ಸುAಟಿಕೊಪ್ಪ, ಜ. ೧೭: ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಜನರನ್ನು ಆಕರ್ಷಿಸಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಹಾಗೂ ಪಂಚಾಯಿತಿ ಸದಸ್ಯ ರಫೀಕ್ ಖಾನ್ ಮಕ್ಕಳ ಸಂತೆಯನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ಕೇವಲ ಶಿಕ್ಷಣಕ್ಕೆ ಸೀಮಿತವಾಗಿರದೆ ಸಾಮಾಜಿಕವಾಗಿ ವ್ಯವಹಾರಿಕ ಜ್ಞಾನವನ್ನು ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಂತೆಯನ್ನು ಆಯೋಜಿಸಲಾಗಿದೆ ಎಂದರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್, ಸರಕಾರವು ಮಕ್ಕಳಿಗೆ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆ ಹಾಗೂ ವ್ಯವಹಾರಿಕ ಜ್ಞಾನದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಇದರಿಂದ ಮಕ್ಕಳ ಭವಿಷ್ಯಕ್ಕೂ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಮಕ್ಕಳು ತರಕಾರಿ, ಸೊಪ್ಪು, ಆಹಾರ ತಿಂಡಿ ತಿನಿಸುಗಳು, ಕಾಫಿ, ಟೀ ಸೇರಿದಂತೆ ತಂಪು ಪಾನೀಸಯಗಳ ವ್ಯಾಪಾರ ಬಲು ಜೋರಾಗಿ ನಡೆಸಿದರು. ವ್ಯಾಪಾರಿಗಳ ರೀತಿಯಲ್ಲಿಯೆ ವ್ಯಾಪಾರ ವಹಿವಾಟನ್ನು ನಡೆಸಿದ ತಮ್ಮ ವ್ಯವಹಾರಿಕ ಪ್ರತಿಭೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭ ನಿವೃತ್ತ ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ, ದೈಹಿಕ ಶಿಕ್ಷಣ ಶಿಕ್ಷಕ ನಂದ, ಸಹಶಿಕ್ಷಕರುಗಳಾದ ಸೌಭಾಗ್ಯ, ಚಂದ್ರಾವತಿ, ಇಂದಿರಾ, ಉಷಾ, ವರ್ಣಿತ, ಸತೀಶ್, ಮಮತಾ, ಅಸೀನ, ಪುನೀತ, ಅಂಜನ, ಶಾಜಿಯ, ಶೋಭಾ, ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರು ಮತ್ತಿತರರು ಇದ್ದರು.