ಪೊನ್ನಂಪೇಟೆ, ಜ. ೧೭: ಕೊಡಗಿನ ಜಮ್ಮಾ ಹಿಡುವಳಿದಾರರನ್ನು ದಶಕದಿಂದ ಕಾಡುತ್ತಿದ್ದ ಜಮ್ಮಾ ಬಾಣೆ ಭೂಮಿಗೆ ಸಂಬAಧಿಸಿದ ತಿದ್ದುಪಡಿ ವಿಧೇಯಕವನ್ನು ಕಳೆದ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವಲ್ಲಿ ಪಾತ್ರ ವಹಿಸಿದ್ದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಸನ್ಮಾನಿಸಲಾಯಿತು.
ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ನ ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿಯವರ ನೇತೃತ್ವದ ನಿಯೋಗ ಶಾಸಕರ ಸೋಮವಾರಪೇಟೆಯ ನಿವಾಸದಲ್ಲಿ ಭೇಟಿ ಮಾಡಿ ಅವರನ್ನು ಸನ್ಮಾನಿಸಿತು.
ಈ ಸಂದರ್ಭ ಮಾತನಾಡಿದ ಕೆಎಂಎ ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ, ಮುಂದೆ ಬೇರೆ ಬೇರೆ ಕಾನೂನುಗಳ ನೆಪಗಳಿಂದ ಹಿಡುವಳಿದಾರರು ಯಾವುದೇ ಸಮಸ್ಯೆ ಎದುರಿಸಬಾರದು. ಇದಕ್ಕಾಗಿ ಈ ಕಾನೂನು ಜಾರಿಗೊಳ್ಳುವ ಹಂತದಲ್ಲೇ ಜನಪ್ರತಿನಿಧಿಗಳ ವಿಶೇಷ ಕಾಳಜಿ ಅಗತ್ಯವಿದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರಾದ ಡಾ. ಮಂತರ್ ಗೌಡ, ಕೊಡಗಿನ ಜಮ್ಮಾ-ಬಾಣೆ ಭೂಮಿ ವಿವಾದಗಳ ಪರಿಹಾರಕ್ಕಾಗಿ ಕರ್ನಾಟಕ ಭೂಕಂದಾಯ ೨ನೇ ತಿದ್ದುಪಡಿ ವಿಧೇಯಕ-೨೦೨೫ ಅನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸುವಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ತೋರಿದ ಇಚ್ಛಾಶಕ್ತಿ ಕೊಡಗಿನ ಜನರ ಪರವಾಗಿತ್ತು. ಕೊಡಗಿನ ಬಹುಕಾಲದ ಈ ಸಮಸ್ಯೆಯನ್ನು ಕಾನೂನು ಬದ್ಧವಾಗಿ ಪರಿಹರಿಸಬೇಕೆಂಬ ಮನಸ್ಸು ಸಚಿವರಿಗೆ ಹಿಂದಿನಿAದಲೂ ಇತ್ತು. ಈ ಕಾರಣಕ್ಕಾಗಿ ಅವರು ಜಮ್ಮಾ ಭೂಮಿ ಸಮಸ್ಯೆಯ ಬಗ್ಗೆ ದೀರ್ಘವಾಗಿ ಅಧ್ಯಯನ ನಡೆಸಿದ್ದರು ಎಂದರಲ್ಲದೆ, ಈ ಕಾನೂನನ್ನು ಕೊಡಗಿನ ಜನತೆ ಸಮರ್ಪಕವಾಗಿ ಮತ್ತು ನ್ಯಾಯೋಚಿತವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕೊಡವ ಮುಸ್ಲಿಂ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ, ಕೋಶಾಧಿಕಾರಿ ಹರಿಶ್ಚಂದ್ರ ಎ. ಹಂಸ, ನಿರ್ದೇಶಕರಾದ ಆಲೀರ ಎಂ. ರಶೀದ್, ಕೋಳುಮಂಡ ರಫೀಕ್, ಕೆಂಗೋಟAಡ ಎಸ್. ಸೂಫಿ ಮತ್ತು ಪರವಂಡ ಎ. ಸಿರಾಜ್ ಅವರು ಉಪಸ್ಥಿತರಿದ್ದರು.