ಪೊನ್ನಂಪೇಟೆ, ಜ. ೧೭: ಇತ್ತೀಚೆಗೆ ನಿಧನ ಹೊಂದಿದ ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಖಜಾಂಚಿಯಾಗಿದ್ದ ಮನೋಹರ್ ಮತ್ತು ಮಾಜಿ ಖಜಾಂಚಿ ವಿಜಯನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು.
ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕಡೇಮಾಡ ಸುನಿಲ್ ಮಾದಪ್ಪ, ಸಂಘದ ಖಜಾಂಚಿಯಾಗಿ ಇಬ್ಬರೂ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ಲೆಕ್ಕಾಚಾರದ ವಿಷಯದಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದು, ಸ್ನೇಹಜೀವಿಗಳಾಗಿದ್ದರು ಎಂದು ಸ್ಮರಿಸಿದರು.
ಗೋಣಿಕೊಪ್ಪಲು ಮರ್ಚೆಂಟ್ ಬ್ಯಾಂಕ್ ಅಧ್ಯಕ್ಷ ಕಿರಿಯಮಾಡ ಅರುಣ್ ಪೂಣಚ್ಚ ಮಾತನಾಡಿ, ವಿಜಯನ್ ಅವರು, ಬ್ಯಾಂಕ್ ಪ್ರಾರಂಭವಾದಾಗಿನಿAದ ಹಲವು ಸಲಹೆ ಸೂಚನೆಗಳನ್ನು ನೀಡಿ ಸಹಕಾರ ನೀಡಿದ್ದಾರೆ. ಮನೋಹರ್ ಅವರು ಕೂಡ ಚೇಂಬರ್‌ನ ಆಸ್ತಿಯಾಗಿದ್ದರು ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ವರ್ತಕ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ, ಪದಾಧಿಕಾರಿಗಳಾದ ಪ್ರಮೋದ್ ಕಾಮತ್, ರಾಜ್‌ಶೇಖರ್, ಶೋಭಿತ್, ಲಕ್ಷ್ಮಿ ರೆಡ್ಡಿ, ಹಂಸ ಇತರರು ಉಪಸ್ಥಿತರಿದ್ದರು.
ಸುಮಿ ಸುಬ್ಬಯ್ಯ ಪ್ರಾರ್ಥಿಸಿ, ಪ್ರಧಾನ ಕಾರ್ಯದರ್ಶಿ ಪೊನ್ನಿಮಾಡ ಸುರೇಶ್ ಸ್ವಾಗತಿಸಿ, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ಬಿ.ಎನ್. ಪ್ರಕಾಶ್ ವಂದಿಸಿದರು.