ಮಡಿಕೇರಿ, ಜ. ೧೭: ಮಡಿಕೇರಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ತಾ.೧೮ ರಂದು (ಇಂದು) ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷೆ ಬಿ.ಎಸ್. ಲೀಲಾವತಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೊಡವ ಸಮಾಜದಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸೋಲೂರು ಮಠದ ಆರ್ಯ ಈಡಿಗ ಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ತಾನು ವಹಿಸಿಸಲಿದ್ದೇನೆ ಎಂದರು.

ಸಾಧಕರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸನ್ಮಾನಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಹರಿಪ್ರಸಾದ್, ಮಾಜಿ ಸದಸ್ಯ ಹರೀಶ್ ಕುಮಾರ್ ಸೇರಿದಂತೆ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪ್ರತಿಭಾ ಪುರಸ್ಕಾರ- ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿನ ಸಮಾಜದ ಪ್ರತಿಭಾವಂತ ೪೦ ರಿಂದ ೫೦ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ಅಲ್ಲದೆ ಎಂ.ಟೆಕ್ ಚಿನ್ನದ ಪದಕ ಪಡೆದ ಚೇರಂಬಾಣೆಯ ಬಿ.ಬಿ.ಸೋನ, ಎಂ.ಫಾರ್ಮದಲ್ಲಿ ಚಿನ್ನದ ಪದಕ ಪಡೆದ ಬಿ.ವಿ.ಮಂಜುಶ್ರೀ, ಅಂತರರಾಷ್ಟಿçÃಯ ಕ್ರೀಡಾಪಟು ಮತ್ತು ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕಿ ಜಾಜಿ ಹಾಗೂ ರಾಷ್ಟಿçÃಯ ವೈದ್ಯಕೀಯ ಸೇವೆ ಹಾಗೂ ಸಂಗೀತ ಪ್ರಶಸ್ತಿ ವಿಜೇತರಾದ ಚಿತ್ರಾ ಆರ್ಯನ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.

ಶಾಸಕರುಗಳಿಗೆ ಗೌರವ: ಮಡಿಕೇರಿ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ನಿವೇಶನಕ್ಕಾಗಿ ಕಳೆದ ೨೩ ವರ್ಷಗಳಿಂದ ಹೋರಾಟ ಮಾಡುತ್ತಾ ಬರಲಾಗಿತ್ತು. ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ಪರಿಶ್ರಮದಿಂದ ಮಡಿಕೇರಿ ಸುದರ್ಶನ ವೃತ್ತದ ಬಳಿ ೨೬ ಸೆಂಟ್ ಜಾಗ ಸಂಘಕ್ಕೆ ಮಂಜೂರಾಗಿದೆ.

ಇದಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಕೂಡ ಸಹಕಾರ ನೀಡಿದ್ದು, ಈ ಹಿನ್ನೆಲೆ ಇವರಿಬ್ಬರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಲೀಲಾವತಿ ಮಾಹಿತಿಯಿತ್ತರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕೆ.ರವೀಂದ್ರ, ನಿಕಟಪೂರ್ವ ಅಧ್ಯಕ್ಷ ಬಿ.ಎಂ.ರಾಜಶೇಖರ್, ಕಾರ್ಯದರ್ಶಿ ಎಂ.ಕೆ.ಮನೋಹರ್ ಸುವರ್ಣ, ಯುವ ಘಟಕದ ಜಿಲ್ಲಾ ಸಂಚಾಲಕ ಬಿ.ಎಂ.ವಿನೋದ್ ಉಪಸ್ಥಿತರಿದ್ದರು.